Featured

ಕರಾವಳಿ ಜಿಲ್ಲೆಗಳ ಮಳೆಹಾನಿ ಪ್ರದೇಶಗಳಿಗೆ ನಾಳೆ ಸಿಎಂ ಬೊಮ್ಮಾಯಿ ಭೇಟಿ – Vishwanews24

ಕರಾವಳಿ ಜಿಲ್ಲೆಗಳ ಮಳೆಹಾನಿ ಪ್ರದೇಶಗಳಿಗೆ ನಾಳೆ ಸಿಎಂ ಭೇಟಿ

ಬೆಂಗಳೂರು: ಭಾರೀ ಮಳೆ ಸುರಿಯುತ್ತಿರುವ ಕರಾವಳಿ ಜಿಲ್ಲೆಗಳ ʻಮಳೆಹಾನಿ ಪ್ರದೇಶಗಳಿಗೆ ʼ ನಾಳೆ ಭೇಟಿ ನೀಡಲಿದ್ದೇನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮಗಳಿಗೆ ಮಾಹಿತಿ ತಿಳಿಸಿದ್ದಾರೆ.

ಮಳೆ ಪೀಡಿತ ಪ್ರದೇಶಗಳಾದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೆ ಭೇಟಿ ಮಾಡಿ ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸುತ್ತೇನೆ. ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಹೂಡುತ್ತೇನೆ , ನೆರೆ ಹಾನಿ ವೀಕ್ಷಿಸಿ ಸ್ಥಳದಲ್ಲೇ ಸೂಚನೆ ನೀಡುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಜು. 12ರ ನಾಳೆ ರಾತ್ರಿ ಉಡುಪಿಯಲ್ಲಿ ವಾಸ್ತವ್ಯ ಮಾಡಿ, ಆ ಬಳಿಕ ಜು. 14 ಕಾರವಾರಕ್ಕೆ ಭೇಟಿ ನೀಡುತ್ತೇನೆ. ರಾಜ್ಯದ ಕಳೆದ 10 ದಿನಗಳಿಂದ ವ್ಯಾಪಕ ಮಳೆಯಾಗುತ್ತಿದೆ. ತೀವವಾಗಿ ಮಳೆ ಸುರಿಯುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಈಗಾಗಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಅಲ್ಲದೆ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಪರಿಹಾರ ಕಾರ್ಯಗಳ ಬಗ್ಗೆ ಸಭೆ ನಡೆಸುತ್ತೇನೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

20 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

20 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

20 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

20 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

21 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago