Featured

ಕರಾವಳಿ ಜಿಲ್ಲೆಗಳ ಮೀನುಗಾರಿಕೆ ಅಭಿವೃದ್ಧಿಗೆ ಬಜೆಟ್ ನಲ್ಲಿ ವಿಶೇಷ ಯೋಜನೆ : ಯಶ್ ಪಾಲ್ ಸುವರ್ಣ ಮನವಿ -Vishwanews24

ಕರಾವಳಿ ಜಿಲ್ಲೆಗಳ ಮೀನುಗಾರಿಕೆ ಅಭಿವೃದ್ಧಿಗೆ ಬಜೆಟ್ ನಲ್ಲಿ ವಿಶೇಷ ಯೋಜನೆ : ಯಶ್ ಪಾಲ್ ಸುವರ್ಣ ಮನವಿ -Vishwanews24

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಮೀನುಗಾರರ ಹಲವು ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ಮುಂಬರುವ 2022- 23ನೇ ಸಾಲಿನ ಬಜೆಟ್ ನಲ್ಲಿ ವಿಶೇಷ ಯೋಜನೆ ರೂಪಿಸುವಂತೆ ಕರಾವಳಿ ಜಿಲ್ಲೆಯ ಸಮಸ್ತ ಮೀನುಗಾರರ ಪರವಾಗಿ ಮೀನುಗಾರಿಕೆ ಸಚಿವರಾದ ಅಂಗಾರ ರವರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಮೀನುಗಾರಿಕೆ ಸಚಿವರ ಅಧ್ಯಕ್ಷತೆ ಯಲ್ಲಿ ಜರಗಿದ ಮೀನುಗಾರಿಕೆ ಇಲಾಖೆಯ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮೀನುಗಾರರ ಬಹುದಿನಗಳ ಬೇಡಿಕೆಗಳಾದ ರಾಜ್ಯ ಮಾರಾಟ ಕರಮುಕ್ತ ಡೀಸೆಲ್ ಕೋಟಾ ಹೆಚ್ಚಳ, ಸೀ ಆಂಬ್ಯುಲೆನ್ಸ್ ಮತ್ತು ತುರ್ತು ಚಿಕಿತ್ಸಾ ಘಟಕ, ಕಾಪು ತೀರದಲ್ಲಿ ನಾಡ ದೋಣಿ ತಂಗಲು ಇಳಿದಾಣ ಕೇಂದ್ರ, ಬಂದರು ಹೂಳು ತೆಗೆಯಲು ಇಲಾಖೆ ವತಿಯಿಂದ ಡ್ರೆಜ್ಜರ್ ಖರೀದಿ, ಮೀನುಗಾರರಿಗೆ 1 ಲಕ್ಷದ ವರೆಗೆ ಶೂನ್ಯ ಬಡ್ಡಿದರ ಸಾಲ ಯೋಜನೆ, ನಾಡ ದೋಣಿಗಳಿಗೆ ಸೀಮೆ ಏಣ್ಣೆ ಪ್ರಮಾಣ ಹೆಚ್ಚಳ, ನಾಡ ದೋಣಿಗಳಿಗೆ ಇಲೆಕ್ಟ್ರಿಕಲ್ ಇಂಜಿನ್ ಪರಿವರ್ತನೆ ಗೆ ಸಹಾಯ ಧನ, ಮೀನುಗಾರರ ಸಹಕಾರಿ ಸಂಘಗಳ ಸಾಲ ಮನ್ನಾ, ಮತ್ಸ್ಯ ಮಹಿಳಾ ಸ್ವಾವಲಂಬನೆ ಯೋಜನೆ ಸಹಿತ ಹಲವು ಯೋಜನೆಗಳಿಗೆ ಬಜೆಟ್ ನಲ್ಲಿ ಅನುದಾನ ಒದಗಿಸಿ ಮೀನುಗಾರಿಕೆ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಮಾ, ನಿರ್ದೇಶಕರಾದ ರಾಮಾಚಾರ್ಯ, ಅಪರ ನಿರ್ದೇಶಕರಾದ ತಿಪ್ಪೇಸ್ವಾಮಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ದಿನೇಶ್ ಎಂ ಕೆ, ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಷನ್ ವ್ಯವಸ್ಥಾಪಕ ನಿರ್ದೇಶಕ ಹರೀಶ್ ಕುಮಾರ್ ಉಪಸ್ಥಿತರಿದ್ದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

4 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

5 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

5 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

6 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

7 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

7 hours ago