Featured

ಕರಾವಳಿ ಜಿಲ್ಲೆಗೆ ಕುಚಲಕ್ಕಿ ವಿತರಿಸಬೇಕೆಂದು ಮುಖ್ಯ ಮಂತ್ರಿಗಳಿಗೆ ಸಚಿವ ಕೋಟ ಹಾಗೂ ಅಂಗಾರ ಮನವಿ -Vishwanews24

ಕರಾವಳಿ ಜಿಲ್ಲೆಗೆ ಕುಚಲಕ್ಕಿ ಪಡಿತರಕ್ಕೆ ಜನಸಾಮಾನ್ಯರಿಗೆ ವಿತರಿಸಬೇಕೆಂದು ಮುಖ್ಯ ಮಂತ್ರಿಗಳಿಗೆ ಸಚಿವ ಕೋಟ ಹಾಗೂ ಅಂಗಾರ ಮನವಿ -Vishwanews24

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರದ ಮೂಲಕ ವಿತರಿಸುತ್ತಿರುವ ಕುಚಲಕ್ಕಿ ಅತ್ಯಂತ ಕಳಪೆ ಗುಣಮಟ್ಟದ್ದಾಗಿದ್ದು, ಜನಸಾಮಾನ್ಯರು ಅದರಲ್ಲೂ ಬಡವರು ಅಕ್ಕಿಯನ್ನು ಉಪಯೋಗಿಸದೆ ಕಡಿಮೆ ದರಕ್ಕೆ ಮಾರಾಟ ಮಾಡಿ ಹೆಚ್ಚು ದರದ ಕೆಂಪು ಕುಚಲಕ್ಕಿಯನ್ನು ಖರೀದಿಸುತ್ತಿದ್ದಾರೆ. ಕೆಲವು ಕಡೆ ಪಡಿತರ ಅಕ್ಕಿಯನ್ನೇ ಪಡೆಯುತ್ತಿಲ್ಲ. ಇದರಿಂದಾಗಿ ಪಡಿತರದ ಮೂಲಕ ತೆಗೆದುಕೊಂಡ ಕಳಪೆ ಗುಣಮಟ್ಟದ ಅಕ್ಕಿಯನ್ನು ಮಾರಾಟ ಮಾಡಿದ ಹಿನ್ನಲೆಯಲ್ಲಿ ಕ್ರಿಮಿನಲ್ ಕೇಸುಗಳು ದಾಖಲಾಗುತ್ತಿರುವುದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಬೇಕಾಗುವ ಕುಚಲಕ್ಕಿಯನ್ನು ಸ್ಥಳೀಯ ರೈತರಿಂದ ಸಂಗ್ರಹಿಸಿ ಅಲ್ಲಿಯ ಪಡಿತರಕ್ಕೆ ಜನಸಾಮಾನ್ಯರಿಗೆ ವಿತರಿಸಬೇಕೆಂದು ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವರಾದ ಎಸ್ ಅಂಗಾರ ರವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಮನವಿ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಸುಮಾರು 58 ಸಾವಿರ ಕ್ವಿಂಟಲ್ ಪಡಿತರ ಅಕ್ಕಿಯ ಅಗತ್ಯವಿದ್ದು, ಉಡುಪಿ ಜಿಲ್ಲೆಗೆ 40 ಸಾವಿರ ಕ್ವಿಂಟಲ್ ಪಡಿತರ ಅಕ್ಕಿ ಬೇಕಾಗಿದ್ದು, ಒಟ್ಟು ಸರಾಸರಿ ತಿಂಗಳಿಗೆ ಒಂದು ಲಕ್ಷ ಕ್ವಿಂಟಲ್ ಆಗತ್ಯವಿದ್ದು ಇದಕ್ಕೆ ಬೇಕಾಗುವಷ್ಟು ಭತ್ತದ ಬೆಳೆ ಅವಳಿ ಜಿಲ್ಲೆಯಲ್ಲಿ ಲಭ್ಯವಿಲ್ಲದೇ ಇರುವುದರಿಂದ ಮೈಸೂರು, ಮಂಡ್ಯ ಮುಂತಾದೆಡೆಯಿಂದ ಜಯ ಮತ್ತು ಇನ್ನಿತರ ಭತ್ತದ ತಳಿಯ ಫಸಲನ್ನು ಸಂಗ್ರಹಿಸಿ ಕುಚಲಕ್ಕಿಯನ್ನು ತಯಾರಿಸುವ ಕುರಿತು ಮುಖ್ಯ ಮಂತ್ರಿಗಳಿಗೆ ಮನವಿ ಸಮರ್ಪಿಸಲಾಯಿತು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ತಕ್ಷಣ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.

ನಂತರ ವಿಧಾನಸೌಧದಲ್ಲಿ ಸಚಿವ ಕೋಟ ಅವರ ಕಛೇರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಶ್ರೀ ಉಮೇಶ್ ವಿ, ಕತ್ತಿ, ಮಾನ್ಯ ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್. ಅಂಗಾರ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರಾದ ಶ್ರೀ ಕಿರಣ್ ಕೊಡ್ಗಿ, ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಶ್ರೀ ಸಂಜೀವ ಮಠಂದೂರು ಮುಂತಾದ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಸಮಕ್ಷಮ ನಡೆದ ಸಭೆಯಲ್ಲಿ ಮುಂದಿನ ಒಂದು ವಾರಗಳಲ್ಲಿ ಕರಾವಳಿ ಜಿಲ್ಲೆಯ ಅಕ್ಕಿ ಗಿರಣಿ ಮಾಲೀಕರು ಮತ್ತು ಆಹಾರ ನಿಗಮದ ಅಧಿಕಾರಿಗಳು ಮತ್ತು ಅವಳ ಜಿಲ್ಲೆಯ ಜಿಲ್ಲಾಧಿಕಾರಿಗಳ ಸಮಕ್ಷಮ ಸಭೆ ನಡೆಸಿ ಕುಚಲಕ್ಕಿಯ ತಯಾರಿಕೆಗಾಗಿ ಭತ್ತದ ಖರೀದಿ, ಸಂಸ್ಕರಣೆ, ವಿತರಣೆ ಕುರಿತು ಸೂಕ್ತ ಮಾರ್ಗೋಪಾಯ ಕಂಡುಹಿಡಿಯಲು ಅಗತ್ಯ ಕ್ರಮಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸಚಿವ ಶ್ರೀ ಉಮೇಶ್ ವಿ, ಕತ್ತಿಯವರು ಸೂಚಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಹಿರಿಯ ಅಧಿಕಾರಿಗಳು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಉಪ ನಿರ್ದೇಶಕರು ಉಪಸ್ಥಿತರಿದ್ದರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 hour ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

1 hour ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

2 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

6 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

6 hours ago