Featured

ಕರಾವಳಿ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕೆಡಿಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24

ಕರಾವಳಿ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಕೆಡಿಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ – Vishwanews24

ಕರಾವಳಿಯಲ್ಲಿ ಶಾಂತಿ ಕಾಪಾಡಲು ಸರ್ವ ಧರ್ಮೀಯರ ಸಹಕಾರ ಅಗತ್ಯ ..

ಬೆಳಗಾವಿ,: ಕರಾವಳಿ ಜಿಲ್ಲೆಯಲ್ಲಿ, ಕೋಮು ಸೌಹಾರ್ದವನ್ನು ಕಲುಷಿತ ಗೊಳಿಸುವ, ಸಮಾಜ ವಿರೋಧಿ ಶಕ್ತಿಗಳನ್ನು ಬಗ್ಗು ಬಡಿಯಲಾಗುವುದು, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಬುಧವಾರ ವಿಧಾನಸಭೆಯಲ್ಲಿ ತೀವ್ರ ಎಚ್ಚರಿಕೆ ನೀಡಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ, ಕಾಂಗ್ರೆಸ್ ಸದಸ್ಯ ಯು ಟಿ ಖಾದರ್ ಅವರ ಪ್ರಶ್ನೆಗೆ ಉತ್ತರಿಸುತ್ತಿದ್ದ ಸಚಿವರು, “ಕರಾವಳಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕೋಮು ಸಾಮರಸ್ಯ ವಾತಾವರಣವನ್ನು ಕೆಡಿಸುವ, ಕೆಲವರ, ಪ್ರಯತ್ನಗಳ ಬಗ್ಗೆ ವರದಿಗಳನ್ನು ಗಮನಿಸಿದ್ದೇನೆ, ಅವುಗಳಿಗೆ ನಿಯಂತ್ರಣ ಹೇರುವ ಬಗ್ಗೆ ಗಂಭೀರ ಪ್ರಯತ್ನ ನಡೆದಿದೆ” ಎಂದು ತಿಳಿಸಿದರು.

ಉಪ್ಪಿನಂಗಡಿ ಪಟ್ಟಣದಲ್ಲಿ ಪೊಲೀಸರ ಮೇಲೆಯೂ ಹಲ್ಲೆಯಾಗಿದೆ, ಸಾಮಾಜಿಕ ಜಾಲತಾಣ ವನ್ನು ದುರುಪಯೋಗ ಪಡಿಸಿಕೊಂಡು, ದೇಶ ವಿರೋಧಿ ಸಂದೇಶಗಳನ್ನು ಹರಿಬಿಡಲಾಗುತ್ತಿದೆ, ಎಂದ ಸಚಿವರು ಸ್ಥಳೀಯ ಪೊಲೀಸರು ಈ ಎಲ್ಲ ವಿದ್ಯಮಾನಗಳನ್ನು ಗಮನಿಸಿ ಕ್ರಮ ಕೈಗೊಂಡಿದ್ದಾರೆ, ಅವರ ಪ್ರಯತ್ನ ದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದೂ ಸಚಿವರು ಹೇಳಿದರು.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

11 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

13 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

13 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

13 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

13 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

14 hours ago