ಕರಾವಳಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ: ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗೆ ಉರುಳಿದ ಮರ , ಮತ್ತೆ ಭೂಕುಸಿತದ ಆತಂಕ -Vishwanews24

Featured, ದಕ್ಷಿಣ ಕನ್ನಡ

ಬೆಳ್ತಂಗಡಿ: ರಾಜ್ಯದ ಕರಾವಳಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತದ ಆತಂಕ ಕಾಡುತ್ತಿದೆ.

ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಅಲ್ಲಲ್ಲಿ ಸಣ್ಣ ಪ್ರಮಾಣದ ಭೂ ಕುಸಿತಗಳಾದ್ದು ಮೂಡಿಗೆರೆ ತಾಲೂಕಿಗೆ ಸೇರಿದ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಣ್ಣು ಕುಸಿತ ಉಂಟಾಗಿದೆ. ತಕ್ಷಣ ಮಣ್ಣನ್ನು ತೆರವುಗೊಳಿಸಲಾಗಿದೆ.

ಕಳೆದ ಆಗಸ್ಟ್‌ನ ಪ್ರಳಯವನ್ನು ನೆನಪಿಸುವಂತೆ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿತ್ತು.

ಭಾರೀ ಮಳೆಗೆ ರಾತ್ರಿಯಲ್ಲಿ ಮರವೊಂದು ಧರಶಾಹಿಯಾಗಿದ್ದು ಅದನ್ನು ತೆರವುಗೊಳಿಸಲಾಗಿದೆ. ಘಾಟಿ ರಸ್ತೆಯಲ್ಲಿ ಪ್ರಸ್ತುತ ರಾತ್ರಿ ವಾಹನ ಸಂಚಾರಕ್ಕೆ ನಿರ್ಬಂಧವಿರುವ ಹಿನ್ನೆಲೆಯಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.