ಕರಾವಳಿ ಜಿಲ್ಲೆ ಹೊರತು ಪಡಿಸಿ ಬೇರೆಡೆ ಕಂಬಳ ನಿರ್ಬಂಧಕ್ಕೆ ಹೈಕೋರ್ಟ್ ನಕಾರ – vishwanews24
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಹೊರತು ಪಡಿಸಿ ಬೇರೆಡೆ ಕಂಬಳ ನಿರ್ಬಂಧಕ್ಕೆ ಹೈಕೋರ್ಟ್ ನಕಾರ
ಬೇರೆಡೆ ಆಯೋಜಿಸದಂತೆ ಹೈಕೋರ್ಟ್ ಮೊರೆ ಹೋಗಿದ್ದ ಪೆಟಾ
ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಹೊರತು ಪಡಿಸಿ ರಾಜ್ಯದ ಬೇರೆ ಯಾವುದೇ ಸ್ಥಳಗಳಲ್ಲಿ ಕಂಬಳ ಆಯೋಜಿಸದಂತೆ ರಾಜ್ಯ ಸರಕಾರವನ್ನು ನಿರ್ಬಂಧಿಸಲು ಹೈಕೋರ್ಟ್ ನಿರಾಕರಿಸಿದೆ.
ಕರಾವಳಿ ಜಿಲ್ಲೆಗಳಾದ ದ.ಕ. ಮತ್ತು ಉಡುಪಿ ಜಿಲ್ಲೆಗಳನ್ನು ಹೊರತು ಪಡಿಸಿ ರಾಜ್ಯದ ಬೇರೆ ಜಿಲ್ಲೆ ಅಥವಾ ಭಾಗಗಳಲ್ಲಿ ಕಂಬಳ ಆಯೋಜನೆ ನಿರ್ಬಂಧಿಸಲು ಸರಕಾರಕ್ಕೆ ನಿರ್ದೇಶಿಸಬೇಕು. ಪಿಲಿಕುಳ ಜೈವಿಕ ಉದ್ಯಾನ ವನದ (ನಿಸರ್ಗ ಧಾಮ) ಬಳಿ ಕಂಬಳ ಆಯೋಜನೆಗೆ ಅನುಮತಿ ನೀಡಬಾರದು ಎಂದು ಕೋರಿ “ಪೀಪಲ್ ಫಾರ್ಎಥಿಕಲ್ ಟ್ರಿಟಿ3⁄4ಂಟ್ ಆಫ್ ಅನಿಮಲ್’ (ಪೆಟಾ) 2024ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತು.
ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ: ಶಬರಿಮಲೆ ಭಕ್ತರಿಗೆ ರಾಜ್ಯ ಆರೋಗ್ಯ ಇಲಾಖೆಯ ಮಾರ್ಗಸೂಚಿ – vishwanews24
ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ವಿಭಾಗೀಯ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಿತು. ಸಾಂಪ್ರದಾಯಿಕ ಕ್ರೀಡೆಗಳು ವಹಿಸುವ ಮಹತ್ವದ ಪಾತ್ರವನ್ನು ಪರಿಗಣಿಸಿ ರಾಜ್ಯದಲ್ಲಿ ಕಂಬಳ ಅಥವಾ ಎತ್ತಿನಗಾಡಿ ಓಟದ ಸ್ಪರ್ಧೆಗೆ ವಿನಾಯಿತಿ ನೀಡುವುದು ಸೂಕ್ತವೆಂದು ಶಾಸಕಾಂಗವು ಪರಿಗಣಿಸಿ ಪ್ರಾಣಿಗಳ ಮೇಲಿನ ಹಿಂಸೆ ತಡೆ ಕಾಯ್ದೆಗೆ ಎರಡನೇ ತಿದ್ದುಪಡಿ ತರಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಜನರ ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸುವ ಮತ್ತು ಉತ್ತೇಜಿಸುವ ನಿಟ್ಟಿನಲ್ಲಿ ಸಾಂಪ್ರದಾಯಿಕ ಕ್ರೀಡೆಯಾದ ‘ಕಂಬಳ’ ಅಥವಾ ‘ಎತ್ತುಗಳ ಓಟ’ ಅಥವಾ ‘ಎತ್ತಿನ ಬಂಡಿ ಓಟ’ ವಹಿಸಿದ ಮಹತ್ವದ ಪಾತ್ರವನ್ನು ಪರಿಗಣಿಸಿ ಹಾಗೂ ಸ್ಥಳೀಯ ತಳಿಗಳ ಜಾನುವಾರುಗಳ ಉಳಿವು ಮತ್ತು ಸಂರಕ್ಷಣೆ ಖಚಿತಪಡಿಸಿಕೊಳ್ಳುವಲ್ಲಿ ಕರ್ನಾಟಕ ಸರಕಾರವು ರಾಜ್ಯದಲ್ಲಿ ಕಂಬಳ ಅಥವಾ ಎತ್ತುಗಳ ಓಟ ಅಥವಾ ಎತ್ತಿನ ಬಂಡಿ ಓಟ ಆಯೋಜನೆಗೆ ಕಾಯ್ದೆಯಿಂದ ವಿನಾಯಿತಿ ನೀಡಲು ನಿರ್ಧರಿಸಿದೆ. ಈ ಕಾರಣದಿಂದ, ದ.ಕ. ಮತ್ತು ಉಡುಪಿ ಜಿಲ್ಲೆಗಳ ಹೊರಗಿನ ಯಾವುದೇ ಸ್ಥಳದಲ್ಲಿ ಕಂಬಳ ಕ್ರೀಡೆ ಆಯೋಜಿಸದಂತೆ ಸರಕಾರವನ್ನು ನಿರ್ಬಂಧಿಸಬೇಕೆಂಬ ಅರ್ಜಿದಾರರ ಮನವಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.
