Featured

ಉಡುಪಿ : ಕರಾವಳಿ ತೀರದ ಮೇರು ಕಲೆ ಯಕ್ಷಗಾನಕ್ಕೆ ಮೊದಲ ರಾಷ್ಟ್ರಪ್ರಶಸ್ತಿಯನ್ನು ತಂದಿತ್ತ ಹಾರಾಡಿ ರಾಮಗಾಣಿಗರು – Vishwanews24

ಕರಾವಳಿ ತೀರದ ಮೇರು ಕಲೆ ಯಕ್ಷಗಾನಕ್ಕೆ ಮೊದಲ ರಾಷ್ಟ್ರಪ್ರಶಸ್ತಿಯನ್ನು ತಂದಿತ್ತ ಹಾರಾಡಿ ರಾಮಗಾಣಿಗರು

ಲೇ :ಸುರೇಂದ್ರ ಪಣಿಯೂರು
ಉಡುಪಿ ಜಿಲ್ಲೆಯ ಬ್ರಹ್ಮಾವರದ ಬಳಿಯ ಹಾರಾಡಿಯಲ್ಲಿ 1902 ಮೇ 27 ರಂದು ಸುಬ್ಬಣ್ಣ ಗಾಣಿಗ ಮತ್ತು ಕೊಲ್ಲು ದಂಪತಿಗಳ 2 ನೇ ಪುತ್ರನಾಗಿ ಜನಿಸಿದ ರಾಮ ಗಾಣಿಗರ ವಿದ್ಯಾಭ್ಯಾಸ ಬೈಕಾಡಿಯ ಐಗಳ ಮಠದಲ್ಲಿ 2 ನೇ ತರಗತಿಯವರೆಗೆ ಮಾತ್ರ .
ತನ್ನ 14 ನೇ ವಯಸ್ಸಿನಲ್ಲಿ ಮಾರಣಕಟ್ಟೆ ಮೇಳದಲ್ಲಿ ಬಾಲಗೋಪಾಲನಾಗಿ ಮೊದಲು ಗೆಜ್ಜೆ ಕಟ್ಟಿ , ಯಕ್ಷಗಾನ ರಂಗಕ್ಕೆ ಪಾದಾರ್ಪಣೆ ಮಾಡಿದ ಅವರು . ಒಂದು ವರ್ಷದ ತಿರುಗಾಟದ ಬಳಿಕ ಇತಿಹಾಸ ಪ್ರಸಿದ್ಧ ಮಂದಾರ್ತಿ ಮೇಳಕ್ಕೆ ಸೇರ್ಪಡೆಗೊಂಡರು. ಆ ಮೇಳವೊಂದರಲ್ಲಿ 45 ವರ್ಷಗಳ ಸುಧೀರ್ಘ ಕಾಲ ತಿರುಗಾಟ ನಡೆಸಿದುದು ದಾಖಲೆಯಾಗಿದೆ.  ಪ್ರಖ್ಯಾತಿಯ ಉತ್ತುಂಗಕ್ಕೇರಿದ ಅವರು  . ಮಂದಾರ್ತಿ ಮೇಳ ಮಾತ್ರವಲ್ಲದೆ ಅಮೃತೇಶ್ವರಿ ಮೇಳ ಕೋಟ, ಅಂದಿನ ಕಾಲದ ವರಂಗ ಮೇಳ, ಸೌಕೂರು ಮೇಳ, ಸಾಲಿಗ್ರಾಮ ಮೇಳದಲ್ಲೂ ಕೆಲ ಕಾಲ ತಿರುಗಾಟ ಮಾಡಿದ್ದರು ಎನ್ನುವುದು ದಾಖಲೆಗಳಿಂದ ಲಭ್ಯವಾಗಿದೆ.
ಯಕ್ಷಗಾನ ಬಡಗು ನಡುತಿಟ್ಟನ್ನು ಬೆಳಗಿದ ಹಾರಾಡಿ ರಾಮಗಾಣಿಗರು ಕರ್ಣ,ಋತುಪರ್ಣ,ತಾಮ್ರಧ್ವಜ, ಅರ್ಜುನ , ಕೌಂಡ್ಲಿಕ, ಮಾರ್ತಾಂಡತೇಜ, ಭೀಮ ಹಿರಣ್ಯಕಶ್ಯಪು,ಜಾಂಬವ,ಭೀಷ್ಮ, ಅಂಗಾರವರ್ಮ, ಚಿತ್ರಸೇನ ಮೊದಲಾದ ಪಾತ್ರಗಳಿಂದ ಪ್ರಖ್ಯಾತರಾಗಿದ್ದರು.
ತನ್ನ ಜೀವಿತ ಕಾಲದಲ್ಲಿ ಕರಾವಳಿಯಲ್ಲಿ  ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದ  ಅವರು ರಂಗದಲ್ಲೂ ನಿಜ ಜೀವನದಲ್ಲೂ ಆದರ್ಶಪ್ರಾಯ ವ್ಯಕ್ತಿಯಾಗಿದ್ದರು.
ತನ್ನ ಪಾತ್ರವೈಭವದ ಮೂಲಕ ಯಕ್ಷಗಾನ ಬಯಲಾಟ ರಂಗವನ್ನು ಶ್ರೀಮಂತಗೊಳಿಸಿದ್ದ ರಾಮಗಾಣಿಗರಿಗೆ 1961 ರಲ್ಲಿ ಮೈಸೂರು ರಾಜ್ಯ ಸಂಗೀತ ನಾಟಕ ಅಕಾಡೆಮಿ ಪುರಸ್ಕಾರ, 1962 ರಲ್ಲಿ ರಾಜ್ಯ ಪ್ರಶಸ್ತಿಯನ್ನು ಅಂದಿನ ಮುಖ್ಯಮಂತ್ರಿಗಳಾಗಿದ್ದ ಎಸ್‌.ನಿಜಲಿಂಗಪ್ಪನವರು ನೀಡಿ ಗೌರವಿಸಿದ್ದರು
1964 ರಲ್ಲಿ ಸರ್ವಪಲ್ಲಿ  ಡಾ.ರಾಧಾಕೃಷ್ಣನ್‌ ರವರು ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದರು. 1966ರಲ್ಲಿ ಪಾರ್ಶ್ವವಾಯು ಪೀಡಿತರಾದ ರಾಮಗಾಣಿಗರು 1968  ಡಿಸೆಂಬರ್‌ 11 ರಂದು ಇಹಲೋಕದ ಯಾತ್ರೆ ಮುಗಿಸಿದರು.
ಲೇ :ಸುರೇಂದ್ರ ಪಣಿಯೂರು
Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago