Featured

ಕರಾವಳಿ ಪ್ರದೇಶದಲ್ಲಿ ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ: ಡಿಸಿಎಂ ಡಿ.ಕೆ. ಶಿ – vishwanews24

ಕರಾವಳಿ ಪ್ರದೇಶದಲ್ಲಿ ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ: ಡಿಸಿಎಂ ಡಿ.ಕೆ. ಶಿ

ಮಂಗಳೂರು: ಕರಾವಳಿ ಭಾಗದಲ್ಲಿ ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಮಾತ್ರವಲ್ಲದೆ, ಹಿಂದಿನ ಬಿಜೆಪಿ ಸರ್ಕಾರವೂ ವಿಫಲವಾಗಿದೆ ಎಂದು ಒಪ್ಪಿಕೊಂಡರು. “ಮಂಗಳೂರು ಹಾಗೂ ಕರಾವಳಿ ಭಾಗದ ಜನ ಉದ್ಯೋಗಕ್ಕಾಗಿ ಮುಂಬೈ, ದುಬೈ, ಬೆಂಗಳೂರು ಸೇರಿದಂತೆ ಬೇರೆ ನಗರಗಳಿಗೆ ತೆರಳುತ್ತಿದ್ದಾರೆ. ಇಲ್ಲಿನ ಅಪಾರ ಪ್ರಕೃತಿ ಸಂಪತ್ತನ್ನು ನಾವು ಸರಿಯಾಗಿ ಬಳಸಿಕೊಳ್ಳಲು ವಿಫಲವಾಗಿದ್ದೇವೆ,” ಎಂದು ಅವರು ಹೇಳಿದರು.

ಕರಾವಳಿ ಭಾಗದ ಎಲ್ಲಾ ಶಾಸಕರೊಂದಿಗೆ ಈ ಕುರಿತು ಚರ್ಚೆ ನಡೆಸಿದ್ದು, ಅವರು ಹೆಚ್ಚಿನ ಆಸಕ್ತಿ ತೋರಿಸಿದ್ದಾರೆ. ಪ್ರವಾಸೋದ್ಯಮ ನೀತಿ (ಟೂರಿಸಂ ಪಾಲಿಸಿ) ಕುರಿತು ವಿವರವಾಗಿ ಮಾತುಕತೆ ನಡೆಸಲಾಗಿದೆ. “ಕರಾವಳಿಗೆ ವಿಶೇಷ ಪ್ರವಾಸೋದ್ಯಮ ಯೋಜನೆ ರೂಪಿಸಬೇಕಾಗಿದೆ,” ಎಂದು ಡಿಕೆಶಿ ಹೇಳಿದರು.

ಬಹಳಷ್ಟು ಉದ್ಯಮಿಗಳು, ವಿಶೇಷವಾಗಿ ವಿದೇಶ, ಮುಂಬೈ ಹಾಗೂ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಮೂಲದವರು ಸ್ವಂತ ಊರಿಗೆ ಹೂಡಿಕೆ ಮಾಡಲು ಇಚ್ಛೆ ವ್ಯಕ್ತಪಡಿಸಿದ್ದು, ಸರ್ಕಾರಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ. ಇದರಿಂದ ಇಲ್ಲಿನ ಯುವಜನಾಂಗಕ್ಕೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ಹೇಳಿದರು.

“ಕರಾವಳಿಯ ಯುವಕರು ಪ್ರಜ್ಞಾವಂತರಾಗಿದ್ದಾರೆ. ವಿದೇಶಗಳಿಗೆ ಉದ್ಯೋಗಕ್ಕಾಗಿ ಹೋಗುವ ಬದಲು ಇಲ್ಲಿಯೇ ಉದ್ಯೋಗ ಸೃಷ್ಟಿಯಾಗುವಂತೆ ವ್ಯವಸ್ಥೆ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶಕ್ಕೆ ವಿಶೇಷ ಟೂರಿಸಂ ಪಾಲಿಸಿ ರೂಪಿಸಲಾಗುವುದು,” ಎಂದು ಉಪಮುಖ್ಯಮಂತ್ರಿ ತಿಳಿಸಿದರು.

ಉದ್ಯಮಿಗಳು ಹಾಗೂ ಅಧಿಕಾರಿಗಳೊಂದಿಗೆ ಮತ್ತಷ್ಟು ಚರ್ಚೆ ನಡೆಸಿ, ಎದುರಿಸುತ್ತಿರುವ ಸಮಸ್ಯೆಗಳು ಏನು, ಸರ್ಕಾರ ಯಾವ ರೀತಿಯ ಸಹಾಯ ನೀಡಬಹುದು ಎಂಬುದನ್ನು ಪರಿಶೀಲಿಸಲಾಗುವುದು. ಖಾಸಗಿ ಸಹಭಾಗಿತ್ವವೂ ಅಗತ್ಯವಿದ್ದು, ಉದ್ಯಮಿಗಳು ಹಾಗೂ ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.

ಈ ಕುರಿತು ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ನೀಡಬೇಕು. ಸಿಆರ್‌ಜೆಡ್ (CRZ), ರಕ್ಷಣಾ ಇಲಾಖೆ, ಕರಾವಳಿ ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲರನ್ನು ಸಭೆಗೆ ಕರೆಯಲಾಗಿದೆ ಎಂದು ಅವರು ಹೇಳಿದರು.

“ಕರಾವಳಿ ಭಾಗದಲ್ಲಿ ಇನ್ನೂ ಒಂದು ಫೈವ್‌ಸ್ಟಾರ್ ಹೋಟೆಲ್ ಕೂಡ ಇಲ್ಲ. ಮುಂದಿನ ದಿನಗಳಲ್ಲಿ ಅಗತ್ಯವಿರುವ ಎಲ್ಲಾ ಸೌಕರ್ಯಗಳು ಇಲ್ಲಿಗೆ ಬರಬೇಕು,” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago