ಕರ್ನಾಟಕ ಕರಾವಳಿಗೆ ಸೋಮವಾರ ಮುಂಗಾರು ಪ್ರವೇಶವಾಗಿದ್ದು, ಇನ್ನೆರಡು ದಿನಗಳಲ್ಲಿ ರಾಜ್ಯಾದ್ಯಂತ ಪಸರಿಸಲಿದೆ. ಬಳಿಕ ಮಳೆಯ ತೀವ್ರತೆ ಜಾಸ್ತ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾನ್ಸೂನ್ ಪ್ರವೇಶ ಪರಿಣಾಮ ಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನವಿಡೀ ಮೋಡಕವಿದ ವಾತಾವರಣ, ತುಂತುರು-ಸಾಧಾರಣ ಮಳೆ ಕಂಡುಬಂದಿದೆ. ಜೂನ್ 7ರ ಬಳಿಕ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಕರಾವಳಿಗೆ ಮಾನ್ಸೂನ್ ಪ್ರವೇಶವಾಗಿದೆ. ಇನ್ನು ಮೂರು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಬಳಿಕ ಮಳೆ ಪ್ರಮಾಣ ತೀವ್ರವಾಗುವ ಸಾಧ್ಯತೆ ಇದೆ. ಜೂ.7ರ ಮಳೆ ಪ್ರಮಾಣ ನೋಡಿಕೊಂಡು ಮುಂದಿನ ತೀವ್ರತೆಯನ್ನು ಲೆಕ್ಕಹಾಕಬಹುದು ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವಿಜ್ಞಾನಿ ಪ್ರೊ.ಎಸ್.ಎಸ್.ಎಂ. ಗಾವಸ್ಕರ್ ತಿಳಿಸಿದ್ದಾರೆ.
ಭಾರಿ ಮಳೆ ಮುನ್ಸೂಚನೆ: ಮುಂಗಾರು ಬಲಗೊಳ್ಳುತ್ತಿದ್ದು, ಜೂನ್ 7ರಿಂದ ಕೇರಳ, ಕರ್ನಾಟಕ ಮತ್ತು ಗೋವಾ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 10ರಿಂದ ಕರಾವಳಿ ಕರ್ನಾಟಕ, ಗೋವಾ, ಮುಂಬೈ ಕರಾವಳಿಯಲ್ಲಿ ಪ್ರವಾಹ ಮಾದರಿಯಲ್ಲಿ ಮಳೆ ಬರುವ ಸಾಧ್ಯತೆ ಇದೆ. ಜೂನ್ 5, 6ರಂದು ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡದಲ್ಲಿ ಗಾಳಿ ಮಳೆಯೊಂದಿಗೆ ಗುಡುಗು ಮಿಂಚು ಕಾಣಿಸಿಕೊಳ್ಳಲಿದೆ. ಬಳಿಕ ಮಳೆ ತೀವ್ರತೆ ಜಾಸ್ತಿಯಾಗಲಿದ್ದು, ಜೂನ್ 9ರವರೆಗೆ ನಿರಂತರ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರಿ ಗಾಳಿ ಜತೆ ಭಾರಿ ಮಳೆಯಾಗಬಹುದು ಎಂದು ಹವಾಮಾನ ವರದಿ ತಿಳಿಸಿದೆ.
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…
ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್ ನೇರ…
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…
ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…
ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…