Featured

ಕರಾವಳಿ ಬಿಲ್ಲವ‌ ಸಮುದಾಯದ ಮುಖಂಡರಿಗೆ ಸಿಗದ ಸಚಿವ ಸ್ಥಾನ : ಕಾಂಗ್ರೆಸ್ ಬಿಲ್ಲವ ಮುಖಂಡರ ಅಸಮಾಧಾನ – Vishwanews24

ಕರಾವಳಿ ಬಿಲ್ಲವ‌ ಸಮುದಾಯದ ಮುಖಂಡರಿಗೆ ಸಿಗದ ಸಚಿವ ಸ್ಥಾನ : ಕಾಂಗ್ರೆಸ್ ಬಿಲ್ಲವ ಮುಖಂಡರ ಅಸಮಾಧಾನ

ಮಂಗಳೂರು: ಕರಾವಳಿಯ ಬಿಲ್ಲವ‌ ಸಮುದಾಯದ ಮುಖಂಡರಿಗೆ ಸಚಿವ ಸ್ಥಾನ ಸಿಗದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಲ್ಲವ ಮುಖಂಡರು ಅಸಮಾಧಾನ ತಮ್ಮ ವ್ಯಕ್ತಪಡಿಸಿದ್ದಾರೆ.

ಶನಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಪಕ್ಷದ ನಿರ್ಧಾರದಿಂದ ಬೇಸರವಾಗಿದೆ. ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅಥವಾ ಹರೀಶ್ ಕುಮಾರ್‌ ಅವರಿಗೆ ಸಚಿವ ಸ್ಥಾನ ಸಿಗಬಹುದು ಎನ್ನುವ ವಿಶ್ವಾಸವಿತ್ತು. ಆದರೆ ಇಬ್ಬರನ್ನೂ ಕಡೆಗಣಿಸಲಾಗಿದೆ. ಈ ಸಂಬಂಧ ರಾಜ್ಯ ನಾಯಕರ ಜತೆ ಮಾತುಕತೆ ನಡೆಸಲಾಗಿದ್ದು, ಸೂಕ್ತ ಸ್ಥಾನ‌‌ಮಾನ‌ ನೀಡಬೇಕು ಎಂದು ಆಗ್ರಹಿಸಲಾಗಿದೆ ಎಂದರು.

ಪ್ರವೀಣ್ ನೆಟ್ಟಾರು ಪತ್ನಿಗೆ ಬಿಜೆಪಿಯವರು ಗುತ್ತಿಗೆ ಆಧಾರದ ಕೆಲಸ ನೀಡಿದ್ದರು. ಗುತ್ತಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಹೋಗಿದೆ. ಬಿಜೆಪಿಯವರಿಗೆ ನಿಜವಾದ ಕಾಳಜಿ ಇದ್ದಿದ್ದರೆ ಖಾಯಂ‌ ಸರಕಾರಿ‌ ಕೆಲಸ ಕೊಡಬೇಕಿತ್ತು. ನೆಟ್ಟಾರು ನಮ್ಮ ಸಮುದಾಯಕ್ಕೆ ಸೇರಿದವರು ಅವರ‌ ಪತ್ನಿಗೆ ಸರಕಾರಿ ಕೆಲಸ ಕೊಡಿಸುವ ಜವಾಬ್ದಾರಿ ನಮ್ಮದು ಎಂದರು.

ಮುಖಂಡರಾದ ಉಮೇಶ್ ದಂಡಕೇರಿ, ಗಣೇಶ್ ಪೂಜಾರಿ, ನೀರಜ್ ಪಾಲ್, ಪದ್ಮನಾಭ ಕೋಟ್ಯಾನ್, ಉಲ್ಲಾಸ್ ಕೋಟ್ಯಾನ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago