ಉಡುಪಿ: ಮಲೆನಾಡಿನಲ್ಲಿ ಮಂಗನ ಕಾಯಿಲೆ ಹರಡಿ ಜನರು ಸಾವಿಗೀಡಾಗುತ್ತಿರುವ ಘಟನೆ ನಡೆಯುತ್ತಿರುವಾಗಲೇ ಇದೀಗ ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರಿನಲ್ಲಿ ಎರಡು ಮಂಗಗಳ ಶವ ಮತ್ತು ಶಿವಮೊಗ್ಗ ಜಿಲ್ಲೆಯ ಸಿದ್ದಾಪುರದಲ್ಲಿ ಒಂದು ಹೆಣ್ಣು ಮಂಗದ ಶವ ಪತ್ತೆಯಾಗಿದೆ.
ಜಿಲ್ಲೆಯ ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ. ಸಿದ್ದಾಪುರ ಕಾಡಲ್ಲಿ ಈವರೆಗೆ 9 ಮತ್ತು ಹಳ್ಳಿಹೊಳೆಯಲ್ಲಿ 2 ಮಂಗನ ಕಳೇಬರ ಪತ್ತೆಯಾಗಿದೆ. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿ ಆರೋಗ್ಯ ಅಧಿಕಾರಿಗಳು ಮೃತ ಕೋತಿಯ ದೇಹದ ಕೆಲವು ಭಾಗಗಳನ್ನು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಿಕೊಟ್ಟಿದ್ದಾರೆ
ಸದ್ಯ ಮಂಗನ ಸಾವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಶಿರೂರು ಮೇಲ್ಪಂಕ್ತಿ ಎಂಬಲ್ಲಿ ಎರಡು ಮಂಗಗಳ ಶವ ದೊರೆತಿದೆ. ಕೋತಿಯ ದೇಹದ ಕೆಲವು ಭಾಗಗಳನ್ನು ಆರೋಗ್ಯಾಧಿಕಾರಿಗಳು ಸಂಗ್ರಹಿಸಿ ಹೆಚ್ಚಿನ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳುಹಿಸಿಕೊಡಲಾಗಿದೆ. ಸಿದ್ದಾಪುರದ ಬಳಿ ಸಿಕ್ಕ ಮಂಗನ ಶವವನ್ನು ಇಲಾಖೆಯ ಸಿಬ್ಬಂದಿ ತಪಾಸಣೆಗೆ ಬೇಕಾದ ಭಾಗಗಳನ್ನು ಸಂಗ್ರಹಿಸಿ, ಶಿವಮೊಗ್ಗದ ಲ್ಯಾಬ್ಗೆ ಕಳುಹಿಸಿದ್ದಾರೆ. ಬಳಿಕ ಶವದ ಪೋಸ್ಟ್ಮಾರ್ಟಂ ಮಾಡಿ ದಹಿಸಲಾಗಿದೆ.
ಉಡುಪಿ ಜಿಲ್ಲೆಯ ಕೆಎಂಸಿ ಆಸ್ಪತ್ರೆಯಲ್ಲಿ 42 ಮಂಗನ ಕಾಯಿಲೆ ಶಂಕಿತ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಅದರಲ್ಲಿ 14 ಮಂದಿಗೆ ಕಾಯಿಲೆ ಇರುವುದು ದೃಢಪಟ್ಟಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…