ಮಂಗಳೂರು,: ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆ ಇದ್ದು, ಭಾರತೀಯ ಹವಾಮಾನ ಇಲಾಖೆ ’ಯಲ್ಲೋ ಅಲರ್ಟ್’ ಘೋಷಣೆ ಮಾಡಿದೆ.
ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಸೆಕೆ ಹೆಚ್ಚಿದ್ದು, ಸೋಮವಾರ ಮಧ್ಯಾಹ್ನದ ವೇಳೆಗೆ ಮಳೆ ಸುರಿದು ಇಳೆ ತಂಪಾಗಿತ್ತು. ಸೋಮವಾರ ರಾತ್ರಿ, ಮಂಗಳವಾರ ರಾತ್ರಿಯೂ ಜಿಲ್ಲೆಯ ಕೆಲವೆಡೆ ಮಳೆ ಬಂದಿದೆ. ಅಳದಂಗಡಿ, ನಾರಾವಿ ಸುತ್ತಮುತ್ತ ಮಂಗಳವಾರ ಮಳೆಯಾಗಿದೆ. ಬಂಟ್ವಾಳದ ಹಲವೆಡೆ ಸಾಧಾರಣ ಮಳೆ ಸುರಿದಿದೆ. ತಡರಾತ್ರಿಯೂ ಜಿಲ್ಲೆಯ ಕೆಲವೆಡೆ ಮಳೆಯಾಗಿದೆ.
ದ.ಕ. ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಬುಧವಾರ ಮತ್ತು ಗುರುವಾರವೂ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯಲ್ಲೋ ಎಲರ್ಟ್ ಘೋಷಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…