ಮಂಗಳೂರು: ಕರಾವಳಿ ಸುರಿಯುತ್ತಿರುವ ಭಾರಿ ಮಳೆ ಜೊತೆಗೆ ಕಡಲ ಅಬ್ಬರವೂ ಹೆಚ್ಚಾಗಿದೆ. ಭಾರೀ ಮಳೆಯ ಕಾರಣ ಕಡಲು ತೀರಗಳಲ್ಲಿ ಅಲೆಗಳ ಆರ್ಭಟ ಹೆಚ್ಚಾಗುತ್ತಿದೆ. ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ ಕಡಲ ತೀರದಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ.
ಉಚ್ಚಿಲ- ಬಟ್ಟಪ್ಪಾಡಿ ಸಂಪರ್ಕಿಸುವ ರಸ್ತೆ ಬಹುತೇಕ ಕುಸಿದುಬಿದ್ದಿದೆ. ಕಡಲ್ಕೊರೆತ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ತೀರದಲ್ಲಿರುವ ನಾಲ್ಕೈದು ಕುಟುಂಬಗಳು ತಮ್ಮ ಮನೆಯಿಂದ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ. ಕಡಲ ತೀರದ ಹತ್ತಾರು ಮನೆಗಳು ಕುಸಿದು ಬೀಳುವ ಅಪಾಯದಲ್ಲಿದೆ.
ಈ ನಡುವೆ ಮಂಗಳೂರಿನಿಂದ ಕಾರವಾರದವರೆಗಿನ ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಇಂದು ರಾತ್ರಿ 11:30ರವರೆಗೆ ಬಲವಾದ ಗಾಳಿ ಬೀಸಲಿದ್ದು, ಇದರಿಂದ ಅರಬಿಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ದಡವನ್ನು ಅಪ್ಪಳಿಸಲಿದೆ ಎಂದು ಭಾರತ ಹವಾಮಾನ ಇಲಾಖೆ ಹಾಗೂ ಬೆಂಗಳೂರಿನ ವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ. ಕರ್ನಾಟಕ ಕರಾವಳಿಯುದ್ದಕ್ಕೂ ಗಂಟೆಗೆ 50 ರಿಂದ 60 ಕಿಲೋ ಮೀಟರ್ ವೇಗದ ಗಾಳಿ ಬೀಸುವ ಸಂಭವವಿದ್ದು, ಇದರಿಂದ 3.5ರಿಂದ 5.7ಮಿ. ಎತ್ತರದ ಅಲೆಗಳು ದಡವನ್ನು ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಪಶ್ಚಿಮ ಕರಾವಳಿಯ ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಅದು ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…