ಕರಾವಳಿ ಭಾರಿ ಮಳೆ ಜೊತೆಗೆ ಕಡಲ ಅಬ್ಬರ ; ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ -Vishwanews24

ಮಂಗಳೂರು: ಕರಾವಳಿ ಸುರಿಯುತ್ತಿರುವ ಭಾರಿ ಮಳೆ ಜೊತೆಗೆ ಕಡಲ ಅಬ್ಬರವೂ ಹೆಚ್ಚಾಗಿದೆ. ಭಾರೀ ಮಳೆಯ ಕಾರಣ ಕಡಲು ತೀರಗಳಲ್ಲಿ ಅಲೆಗಳ ಆರ್ಭಟ ಹೆಚ್ಚಾಗುತ್ತಿದೆ. ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ ಕಡಲ ತೀರದಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ.

ಉಚ್ಚಿಲ- ಬಟ್ಟಪ್ಪಾಡಿ ಸಂಪರ್ಕಿಸುವ ರಸ್ತೆ ಬಹುತೇಕ ಕುಸಿದು‌ಬಿದ್ದಿದೆ. ಕಡಲ್ಕೊರೆತ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ತೀರದಲ್ಲಿರುವ ನಾಲ್ಕೈದು ಕುಟುಂಬಗಳು ತಮ್ಮ ಮನೆಯಿಂದ ಬೇರೆಡೆಗೆ ಸ್ಥಳಾಂತರಗೊಂಡಿದ್ದಾರೆ.‌ ಕಡಲ ತೀರದ ಹತ್ತಾರು ಮನೆಗಳು ಕುಸಿದು ಬೀಳುವ ಅಪಾಯದಲ್ಲಿದೆ.

ಈ ನಡುವೆ ಮಂಗಳೂರಿನಿಂದ ಕಾರವಾರದವರೆಗಿನ ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಇಂದು ರಾತ್ರಿ 11:30ರವರೆಗೆ ಬಲವಾದ ಗಾಳಿ ಬೀಸಲಿದ್ದು, ಇದರಿಂದ ಅರಬಿಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ದಡವನ್ನು ಅಪ್ಪಳಿಸಲಿದೆ ಎಂದು ಭಾರತ ಹವಾಮಾನ ಇಲಾಖೆ ಹಾಗೂ ಬೆಂಗಳೂರಿನ ವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ. ಕರ್ನಾಟಕ ಕರಾವಳಿಯುದ್ದಕ್ಕೂ ಗಂಟೆಗೆ 50 ರಿಂದ 60 ಕಿಲೋ ಮೀಟರ್ ವೇಗದ ಗಾಳಿ ಬೀಸುವ ಸಂಭವವಿದ್ದು, ಇದರಿಂದ 3.5ರಿಂದ 5.7ಮಿ. ಎತ್ತರದ ಅಲೆಗಳು ದಡವನ್ನು ಅಪ್ಪಳಿಸುವ ಸಾಧ್ಯತೆ ಇದೆ. ಹೀಗಾಗಿ ಪಶ್ಚಿಮ ಕರಾವಳಿಯ ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಅದು ತಿಳಿಸಿದೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

10 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

10 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

10 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

11 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

11 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

11 hours ago