Featured

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ..

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ

ಕ್ರೂಸ್ ಪ್ರವಾಸೋದ್ಯಮ, ಬೀಚ್ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳಿಗೆ ವಿಶೇಷ ಆದ್ಯತೆ..

ಬೆಂಗಳೂರು: ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡುವ *’ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ಯನ್ನು ರೂಪಿಸಲಾಗುತ್ತಿದೆ. ಈ ನೀತಿಯಲ್ಲಿ ಕ್ರೂಸ್ ಪ್ರವಾಸೋದ್ಯಮ, ಬೀಚ್ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು .

ಇಂದು ಇಂಧನ ಭವನದಲ್ಲಿ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜ್ಯದ ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸುವ ದೂರದೃಷ್ಟಿಯ ಕಾರ್ಯತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಇದನ್ನೂ ಓದಿ :

ರಾಜ್ಯದ ಕರಾವಳಿ ಹಾಗೂ ಮಲೆನಾಡು ವ್ಯಾಪ್ತಿಯ ಆರು ಜಿಲ್ಲೆಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸಿದ್ಧವಾಗುತ್ತಿರುವ ಹೊಸ ಪ್ರವಾಸೋದ್ಯಮ ನೀತಿಯಲ್ಲಿ, ವಿಷಯಾಧಾರಿತ ಪ್ರವಾಸೋದ್ಯಮ ಸರ್ಕೀಟ್ಗಳು, ಕಡಲತೀರ ಪ್ರವಾಸೋದ್ಯಮ, ಕ್ರೂಸ್ ಪ್ರವಾಸೋದ್ಯಮ, ಸಾಹಸ ಕ್ರೀಡೆಗಳು ಹಾಗೂ ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಅಂತಾರಾಷ್ಟ್ರೀಯ ಕ್ರೂಸ್ ಹಡಗುಗಳು ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಬಂದರುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಮಗ್ರ ಕಾರ್ಯತಂತ್ರ ರೂಪಿಸಬೇಕಿದೆ. ಕ್ರೂಸ್ ಪ್ರವಾಸಿಗರು ಕರ್ನಾಟಕದಲ್ಲಿ ಹೆಚ್ಚು ದಿನ ಉಳಿಯುವಂತೆ ಆಕರ್ಷಕ ಪ್ರವಾಸೋದ್ಯಮ ಪ್ಯಾಕೇಜ್ ಗಳು ಮತ್ತು ಸರ್ಕೀಟ್ ಗಳನ್ನು ಅಭಿವೃದ್ಧಿಪಡಿಸಬೇಕು. ಈ ನಿಟ್ಟಿನಲ್ಲಿ ಪ್ರಮುಖ ಕ್ರೂಸ್ ಆಪರೇಟರ್ ಗಳೊಂದಿಗೆ ಸಭೆ ನಡೆಸಿ, ಅವರ ಹಾಗೂ ಪ್ರವಾಸಿಗರ ನಿರೀಕ್ಷೆಗಳನ್ನು ಆಧರಿಸಿ ನೀತಿಯಲ್ಲಿ ಅಗತ್ಯ ಬದಲಾವಣೆಗಳನ್ನು ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದರು.

ಬೀಚ್ ಪ್ರವಾಸೋದ್ಯಮವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಬ್ಲೂ ಫ್ಲಾಗ್ ಬೀಚ್ಗಳ ಅಭಿವೃದ್ಧಿ, ಸ್ವಚ್ಛತೆ, ಸುರಕ್ಷತೆ, ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಮೂಲಸೌಕರ್ಯ, ಜಲಕ್ರೀಡೆಗಳು ಸಾಹಸ ಚಟುವಟಿಕೆಗಳು ಹಾಗೂ ಸಮುದ್ರತೀರದಲ್ಲಿ ಗುಣಮಟ್ಟದ ಪ್ರವಾಸಿ ಅನುಭವ ಕಲ್ಪಿಸುವ ಯೋಜನೆಗಳನ್ನು ಹೊಸ ನೀತಿಯಲ್ಲಿ ಸೇರಿಸಬೇಕು ಎಂದು ಅವರು ತಿಳಿಸಿದರು.

ಇದನ್ನೂ ಓದಿ :

ಇದರ ಜೊತೆಗೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ  ಮತ್ತು ಜಂಗಲ್ ಲಾಡ್ಜಸ್ ಆಂಡ್ ರೆಸಾರ್ಟ್ಸ್ (JLR) ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಗುಣಮಟ್ಟದ ವಸತಿ, ಮೂಲಭೂತ ಸೌಕರ್ಯ, ಸ್ವಚ್ಛತೆ, ಮಾಹಿತಿ ವ್ಯವಸ್ಥೆ ಹಾಗೂ ಪ್ರವಾಸಿಗರಿಗೆ ಅಗತ್ಯವಾದ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಮೂಲಕ ಪ್ರವಾಸಿಗರ ಅನುಭವವನ್ನು ಉತ್ತಮಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

“ಪ್ರವಾಸೋದ್ಯಮ ಎಂದರೆ ಕೇವಲ ಪ್ರವಾಸಿ ತಾಣಗಳ ಅಭಿವೃದ್ಧಿಯಲ್ಲ; ಪ್ರವಾಸಿಗರಿಗೆ ವಿಶ್ವದರ್ಜೆಯ ಅನುಭವವನ್ನು ನೀಡುವ ಸಮಗ್ರ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವುದು. ಉತ್ತಮ ಮೂಲಸೌಕರ್ಯ, ಸುಲಭ ಸಂಪರ್ಕ, ಸುರಕ್ಷತೆ ಮತ್ತು ಗುಣಮಟ್ಟದ ಸೇವೆಗಳ ಮೂಲಕವೇ ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಉತ್ತಮ ಸ್ಥಾನ ಪಡೆಯಬಹುದಾಗಿದೆ” ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು .

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಪ್ರವಾಸೋದ್ಯಮ ಇಲಾಖೆಯ ಆಯುಕ್ತ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಕೆಎಸ್ಟಿಡಿಸಿ ಹಾಗೂ ಜೆಎಲ್ಆರ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ :

Vishwa News 24

Recent Posts

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

19 minutes ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

27 minutes ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

34 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

53 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

3 hours ago