ಕರಾವಳಿ ಮುಂದುವರಿದ ವ್ಯಾಪಕ‌ ಮಳೆ ಸಾರ್ವಜನಿಕರಿಗೆ ತಕ್ಷಣ ಸ್ಪಂದಿಸುವಂತೆ ಅಧಿಕಾರಗಳಿಗೆ ಸೂಚನೆ‌ ನೀಡಿದ ಕಾಪು ಶಾಸಕ ಲಾಲಾಜಿ ಮೆಂಡನ್.

Featured, ಉಡುಪಿ

ಕಾಪು: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವ್ಯಾಪಕ ಗಾಳಿ ಮಳೆಯಾಗುತ್ತಿದ್ದು ಪ್ರಕೃತಿಕ ವಿಕೋಪ ಸ0ಭಾವಿಸುವ ಸಾಧ್ಯತೆಗಳಿದ್ದು ಗ್ರಾಮೀಣ ನೆರೆ ಪೀಡಿತ ಪ್ರದೇಶಗಳ ಬಗ್ಗೆ ಮುಂಜಾಗೃತಾ ಕ್ರಮವಾಗಿ ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳಿಗೆ, ಹಾಗೂ ಕಾಪು ತಾಲೂಕಿನ ತಹಸೀಲ್ದಾರ್ ಹಾಗೂ ಉಡುಪಿ ತಹಸೀಲ್ದಾರ್ ರವರಿಗೆ ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಬಗ್ಗೆ ಹಾಗೂ ಯಾವುದೇ ಸಂದರ್ಭದಲ್ಲಿ ತಕ್ಷಣ ಸ್ಪಂದಿಸುವಂತೆ ಶಾಸಕ ಲಾಲಾಜಿ ಆರ್ ಮೆಂಡನ್ ಸೂಚಿಸಿದರು.