ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕರಾವಳಿ ಕರ್ನಾಟಕದ ಉಡುಪಿ ಮತ್ತು ದ.ಕ. ಜಿಲ್ಲೆಗಳ ನೂತನ ಸಚಿವರಿಗೆ ಪ್ರಮುಖ ಖಾತೆಗಳ ಹಂಚಿಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.
ಉಡುಪಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ, ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲೆಯ ಸುಳ್ಯ ಶಾಸಕ ಎಸ್.ಅಂಗಾರ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾಗಿ ನಿಯುಕ್ತಿಗೊಂಡಿರುವುದು ಸಂತಸ ತಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ನೂತನ ಸಚಿವತ್ರಯರಿಗೆ ಅಭಿನಂದನೆ ಸಲ್ಲಿಸಿರುವ ಅವರು, ಸಚಿವರು ತಮ್ಮ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ವಿಶ್ವಾಸವಿದೆ ಎಂದಿದ್ದಾರೆ. ಈ ಆಯ್ಕೆ ಉಡುಪಿ, ದ.ಕ. ಜಿಲ್ಲೆಗಳ ಸಹಿತ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ ಹಾಡಲಿ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…