Featured

ಕರಾವಳಿ ಸೇರಿದಂತೆ ರಾಜ್ಯದಲ್ಲಿ 24 ಮತ್ತು 25ರಂದು ಭಾರೀ ಮಳೆಯ ಸಾಧ್ಯತೆ -Vishwanews24

ಮಂಗಳೂರು: ರಾಜ್ಯಕ್ಕೆ ಹಿಂಗಾರು ಮಾರುತಗಳ ಅಬ್ಬರ ಜೊರಾಗಿಯೇ ಮುಂದುವರೆದಿದ್ದು, ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಇನ್ನು ಮೂರು ನಾಲ್ಕು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಕನ್ನಡದಲ್ಲಿ ಹಾಗೂ ಬೆಳಗಾವಿಯಲ್ಲಿ 24 ಮತ್ತು 25ರಂದು ಭಾರೀ ಮಳೆಯ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ, ಜಿಲ್ಲೆಗಳಲ್ಲಿ ಕಿತ್ತಳೆ ಬಣ್ಣದ ಮುನ್ನೆಚ್ಚರಿಕೆ ನೀಡಲಾಗಿದೆ.

ರಾಜ್ಯದಾದ್ಯಂತ ಗುಡುಗು ಸಿಡಿಲು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಹೀಗಾಗಿ ಮುಂದಿನ 48 ಗಂಟೆಗಳವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ 21ರಿಂದ 23ರವರೆಗೆ ಬಹುತೇಕ ಎಲ್ಲ ಜಿಲ್ಲೆಗಳ ಆಯ್ದ ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಾಗೂ ಬೆಳಗಾವಿಯಲ್ಲಿ 24 ಮತ್ತು 25ರಂದು ಅತಿ ಭಾರೀ ಮಳೆಯ ನಿರೀಕ್ಷೆ ಇದೆ. ಈ ಜಿಲ್ಲೆಗಳಲ್ಲಿ ಕಿತ್ತಳೆ ಬಣ್ಣದ ಮುನ್ನೆಚ್ಚರಿಕೆ ನೀಡಲಾಗಿದೆ. ಒಂದೇ ದಿನದಲ್ಲಿ 115.6ರಿಂದ 204.4 ಮಿ.ಮೀ.ಮಳೆಯಾಗುವ ಸಂಭವ ಇರುವ ಪ್ರದೇಶದಲ್ಲಿ ಈ ಎಚ್ಚರಿಕೆ ನೀಡಲಾಗುತ್ತದೆ.

ಹಿಂಗಾರು ಮಾರುತಗಳ ಭರ್ಜರಿ ಪ್ರವೇಶದಿಂದ ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ಮಳೆ ಅಬ್ಬರಿಸುತ್ತಿದೆ. ಇನ್ನೂ 3-4 ದಿನಗಳು ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಾತ್ರವಲ್ಲ, ಮುಂದಿನ ಮೂರು ದಿನಗಳು ಮಳೆ ಅಬ್ಬರ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ಕಚೇರಿ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago