Featured

ಬಿಜೆಪಿ ಅಭ್ಯರ್ಥಿಗಳ ಗೆಲುವು ಕರಾವಳಿ ಹಿಂದುತ್ವದ ಭದ್ರಕೋಟೆ ಎಂಬುದು ಸಾಬೀತು : ಯಶ್ಪಾಲ್ ಸುವರ್ಣ – vishwanews24

ಕರಾವಳಿ ಹಿಂದುತ್ವದ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದ ಬಿಜೆಪಿ ಅಭ್ಯರ್ಥಿಗಳ ಪ್ರಚಂಡ ಬಹುಮತದ ಗೆಲುವು : ಯಶ್ಪಾಲ್ ಸುವರ್ಣ

ಬಿಜೆಪಿ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಜಿಲ್ಲೆ ಹಿಂದುತ್ವದ ಭದ್ರಕೋಟೆ ಎಂಬುದನ್ನು ಜನತೆ ಸಾಬೀತು ಮಾಡಿದ್ದಾರೆ

ಉಡುಪಿ: ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ಕರಾವಳಿ ಜಿಲ್ಲೆ ಹಿಂದುತ್ವದ ಭದ್ರಕೋಟೆ ಎಂಬುದನ್ನು ಜನತೆ ಸಾಬೀತು ಮಾಡಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಂತೋಷ ವ್ಯಕ್ತಪಡಿಸಿದ್ದಾರೆ.

ಕೋಟ ಶ್ರೀನಿವಾಸ ಪೂಜಾರಿ ಯವರನ್ನು 2,58,903 ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಕ್ಷೇತ್ರದ ಜನತೆ ಕಾಂಗ್ರೆಸ್ ಸರಕಾರದ ಅವೈಜ್ಞಾನಿಕ ಗ್ಯಾರಂಟಿ ಭಾಗ್ಯಗಳನ್ನು ವಿರೋಧಿಸಿ, ಹಿಂದೂ ವಿರೋಧಿ ನೀತಿಗೆ ದಿಟ್ಟ ಉತ್ತರ ನೀಡಿ ಸಿದ್ಧರಾಮಯ್ಯ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 45,000 ಅಂತರದ ಮುನ್ನಡೆ ನೀಡಿದ್ದು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹತ್ತು ವರ್ಷಗಳ ಸಾಧನೆಗೆ ಜನ ಮನ್ನಣೆ ನೀಡಿದ್ದಾರೆ . ಮುಂದಿನ ದಿನಗಳಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೋಟ ಶ್ರೀನಿವಾಸ ಪೂಜಾರಿ ಯವರು ಸಮರ್ಥ ಸಂಸದರಾಗಿ ಕಾರ್ಯನಿರ್ವಹಿ ಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago