Featured

ಕರಾವಳಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣ ರದ್ದುಗೊಳಿಸಲು ಗೃಹ ಸಚಿವರಿಗೆ ಸಚಿವ ಕೋಟ ಮನವಿ -Vishwanews24

ಕರಾವಳಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣ ರದ್ದುಗೊಳಿಸಲು ಗೃಹ ಸಚಿವರಿಗೆ ಸಚಿವ ಕೋಟ ಮನವಿ -Vishwanews24

ಬೆಂಗಳೂರು : ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಾಸ್ ಪಡೆಯಬೇಕೆಂದು ಸಂಘಟನೆಗಳು ಕೊಟ್ಟಿರುವ ಮನವಿಯನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಗೃಹ ಸಚಿವ ಆರಗ ಜ್ನಾನೇಂದ್ರ ಅವರಿಗೆ ಹಸ್ತಾಂತರಿಸಿದ್ದಾರೆ.

ಅನ್ಯ ಸಂಘಟನೆಯ ಕಾರ್ಯಕರ್ತರ ಪ್ರಕರಣಗಳನ್ನು ಹಿಂದಿನ ಸರ್ಕಾರ ವಾಪಾಸ್ ಪಡೆದಿದ್ದು ಅದೇ ಸಂದರ್ಭದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಕೇಸುಗಳು ಬಾಕಿ ಉಳಿದಿದೆ ಎಂದು ಕರಾವಳಿ ಭಾಗದ ಹಿಂದೂ ಸಂಘಟನೆಗಳು ಕೊಟ್ಟಿದ್ದ ಮನವಿಯನ್ನು ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿರುವ ಇಂತಹಾ ಪ್ರಕರಣಗಳನ್ನು ಕೂಡಲೇ ಮಾಹಿತಿ ಪಡೆದುಕೊಂಡು ಭಾರತೀಯ ಜನತಾ ಪಾರ್ಟಿ ಹಾಗೂ ಹಿಂದೂ ಕಾರ್ಯಕರ್ತರ ಮೇಲಿರುವ ಸುಳ್ಳು ಪ್ರಕರಣಗಳನ್ನು ತಕ್ಷಣ ವಾಪಾಸು ಪಡೆಯಬೇಕೆಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಉಲ್ಲೇಖಿಸಿದರು.

ಗೃಹ ಸಚಿವ ಆರಗ ಜ್ನಾನೇಂದ್ರರವರು ಈ ವಿಷಯಗಳನ್ನು ಕೂಡಲೇ ಗಮನಿಸಿ ಎಲ್ಲಾ ಜಿಲ್ಲೆಗಳಿಂದ ಮಾಹಿತಿಯನ್ನು ಪಡೆದು ಸಚಿವ ಸಂಪುಟದಲ್ಲಿ ಮಂಡಿಸಿ ಸುಳ್ಳು ಕೇಸುಗಳನ್ನು ವಾಪಾಸು ಪಡೆಯುವ ಭರವಸೆ ನೀಡಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago