ರಾಜ್ಯ ನ್ಯೂಸ್

ಕರುಣಾನಿಧಿ ನಿಧನ: ಕರ್ನಾಟಕ-ತಮಿಳುನಾಡು ಬಸ್ ಸಂಚಾರ ಬಂದ್.

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ವಿಧಿವಶರಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಅಧಿಕಾರಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್’ಟಿಸಿ) ಮತ್ತು ತಮಿಳುನಾಡು ರಾಜ್ಯ ಸಾರಿಗೆ ನಿಗಮಗಳ ಬಸ್’ಗಳ ಕಾರ್ಯಾಚರಣೆ ಮಂಗಳವಾ ಸಂಜೆಯಿಂದಲೇ ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ.
ಎರಡೂ ರಾಜ್ಯಗಳ ನಡುವೆ ಸಾರಿಗೆ ಬಸ್ ಗಳ ಸಂಚಾರ ಸ್ಥಗಿತಗೊಂಡಿರುವುದರಿಂದ ಪ್ರಯಾಣಿಕರು ಸಂಕಷ್ಟ ಅನುಭವಿಸುವಂತಾಗಿದೆ.
ನಗರದ ಶಾಂತಿನಗರ ಮತ್ತು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಸಂಜೆ ತಮಿಳುನಾಡಿಗೆ ತೆರಳಲು ಬಂದಿದ್ದ ಪ್ರಯಾಣಿಕರು ಬಸ್ ಸಿಗದೆ ಪರದಾಡುವಂತಾಗಿತ್ತು. ಕೋರಮಂಗಲ, ಸಿಲ್ಕ್’ಬೋರ್ಡ್, ಹೆಬ್ಬಗೋಡಿ, ಆನೇಕಲ್ ಗಡಿಯಲ್ಲಿ ಬಸ್ ಗಾಗಿ ಕಾಯುತ್ತಿದ್ದ ಪ್ರಯಾಣಿಕರು ಎರಡೂ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಂಡ ವಿಚಾರ ತಿಳಿದು ನಿರಾಸೆಗೊಂಡರು.
ಕೆಎಸ್ಆರ್’ಟಿಸಿ ನಿಗಮದ ವ್ಯಾಪ್ತಿಯ ವಿಭಾಗಗಳಿಂದ ನಿತ್ಯ ತಮಿಳುನಾಡು ರಾಜ್ಯಕ್ಕೆ 432 ಬಸ್ ಗಳು ಸಂಚರಿಸುತ್ತವೆ. ಈ ಪೈಕಿ ಚೆನ್ನೈಗೆ 87 ಬಸ್’ಗಳು ಸಂಚರಿಸುತ್ತವೆ. ಇದರಿಂದ ನಿಗಮಕ್ಕೆ ನಿತ್ಯ ರೂ.61.71ಲಕ್ಷ ಆದಾಯ ಬರುತ್ತಿದೆ.
ಕರುಣಾನಿಧಿ ನಿಧನದ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ ಕರ್ನಾಟಕದ ಬಸ್ ಗಳಿಂದ ತೊಂದರೆಯಾಗಬಹುದು ಎಂಬ ನಿರೀಕ್ಷೆಯಿಂದ ಸಂಜೆ 6.30ಕ್ಕೆ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago