Featured

ಕರುನಾಡ ಸಂಭ್ರಮ 2022 – ಚಿರು ಸರ್ಜಾಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿ – Vishwanews24

ಚಿರು ಸರ್ಜಾಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿ

2022ರ ಕರುನಾಡ ಸಂಭ್ರಮಕ್ಕೆ ಅದ್ದೂರಿಯಾಗಿ ತೆರೆ ಬಿದ್ದಿದೆ. ಡಿಸೆಂಬರ್ 10.11 ರಂದು ನಡೆದ 12ನೇ ವರ್ಷದ ಕರುನಾಡ ಸಂಭ್ರಮ ಚಂದನವನದ ಸ್ಟಾರ್ ತಾರೆಗಳ ಸಮಾಗಮ, ಹಾಡು, ಡಾನ್ಸ್ ಗಳಿಂದ ಕಳೆಗಟ್ಟಿತ್ತು. ಎರಡು ದಿನ‌ ಅದ್ದೂರಿಯಾಗಿ‌ ನಡೆದ ಈ ಕಾರ್ಯಕ್ರಮದಲ್ಲಿ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ವತಿಯಿಂದ ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ಕನ್ನಡ ಕಲಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿಯನ್ನು ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ನೀಡಿ ಗೌರವಿಸಿದೆ‌. ಸಹೋದರ ಹಾಗೂ ನಟ ಧ್ರುವ ಸರ್ಜಾ ಪ್ರಶಸ್ತಿಯನ್ನು ಸ್ವೀಕರಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ರು. ಈ ವೇಳೆ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ಅಧ್ಯಕ್ಷ ಕೃಷ್ಣೇಗೌಡ್ರು, ಪ್ರದೀಪ್, ಪ್ರಶಾಂತ್ ಮತ್ತು ತಂಡ ಹಾಜರಿದರು. ವರುಣ್ ಸ್ಟುಡಿಯೋಸ್ ಮತ್ತು ರಾಜ್ ಇವೆಂಟ್ಸ್ ಸಹಯೋಗದಲ್ಲಿ ನಡೆದ ಕರುನಾಡ ಸಂಭ್ರಮ‌ ಯಶಸ್ವಿಯಾಗಿ ತೆರೆ ಕಂಡಿದೆ.

ಕಾರ್ಯಕ್ರಮ ಪ್ರತಿ ವರ್ಷದಂತೆ ಈ ಬಾರಿಯೂ ಕಲರ್ ಫುಲ್ ಆಗಿತ್ತು. ಚಂದನವನದ ಖ್ಯಾತ ತಾರೆಯರು ಭಾಗಿಯಾಗಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಗಿಲ್ಲಕ್ಕೋ ಶಿವ ಗಿಲ್ಲಕ್ಕೋ’ ಹಾಡಿಗೆ ಹೆಜ್ಜೆ ಹಾಕಿ ಕಾರ್ಯಕ್ರಮದ ಎನರ್ಜಿ ಹೆಚ್ಚಿಸಿದ್ರೆ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಕಾವ್ಯಾ ಶಾ, ವಿಕ್ರಮ್ ರವಿಚಂದ್ರನ್, ನಿಧಿ ಸುಬ್ಬಯ್ಯ, ಸಂಗೀತಾ ಶೃಂಗೇರಿ, ವಿರಾಟ್ ಸೇರಿದಂತೆ ಹಲವು ತಾರೆಯರು ತಮ್ಮ ಡಾನ್ಸ್ ಮೂಲಕ ನೆರೆದಿದ್ದವರನ್ನು ರಂಜಿಸಿದರು. ಎಸ್. ಪಿ. ಬಿ ಚರಣ್, ಸಿಂಗರ್ ಮನು, ನವೀನ್ ಸಜ್ಜು, ಅನುರಾಧ ಭಟ್, ವಿಜಯ್ ಪ್ರಕಾಶ್ ತಮ್ಮ ಗಾಯನದ ಮೂಲಕ ಕಾರ್ಯಕ್ರಮದ ರಂಗು ಹೆಚ್ಚಿಸಿದ್ರು. ಮಾನ್ವಿತ ಹರೀಶ್, ಸೃಜನ್ ಲೊಕೇಶ್, ಶ್ರೀನಗರ ಕಿಟ್ಟಿ, ರವಿಶಂಕರ್ ಗೌಡ, ರವಿಶಂಕರ್ ಸೇರಿದಂತೆ ಹಲವು ತಾರೆಯರು ಕಲರ್ ಫುಲ್ ಕರುನಾಡ ಸಂಭ್ರಮ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Vishwa News 24

Recent Posts

ಜಾರಕಿಹೊಳಿ ಕಾನೂನು ಚೌಕಟ್ಟಿನಲ್ಲಿ ವ್ಯವಹಾರ ಮಾಡಿದ್ದಾರೆ , ಅವರು ಏನು ತಪ್ಪು ಮಾಡಿಲ್ಲ : ಡಿಕೆಶಿ – vishwanews24

ಬಿಜೆಪಿ ಕಾಂಗ್ರೆಸ್  ಪಾರ್ಟಿನ ಟ್ರ್ಯಾಪ್‌ ಮಾಡೋದಕ್ಕೆ ತಯಾರಿ ಮಾಡ್ತಿದ್ದಾರೆ .. ಬಿಜೆಪಿಯವರ ಮೇಲೆಲ್ಲೂ ಕೂಡ ED ದಾಳಿ ಮಾಡುತ್ತಿಲ್ಲ ವಂದೇ ಮಾತರಂ…

12 hours ago

ಮಹಾರಾಷ್ಟ್ರ : ಟ್ರಕ್ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ; ಮೂವರು ಮಕ್ಕಳು ಸೇರಿ 8 ಮಂದಿ ದುರ್ಮರಣ – vishwanews24

ಮಹಾರಾಷ್ಟ್ರ :  ಟ್ರಕ್ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ; ಮೂವರು ಮಕ್ಕಳು ಸೇರಿ 8 ಮಂದಿ ದುರ್ಮರಣ…

12 hours ago

ಪೋಪ್ ಲಿಯೋ XIV ಅವರನ್ನು ಭೇಟಿಯಾದ ಉಡುಪಿ ಬಿಷಪ್ ಲೆಸ್ಲಿ ಸಿ ಡಿಸೋಜಾ – vishwanews24

ಪೋಪ್ ಲಿಯೋ XIV ಅವರನ್ನು ಭೇಟಿಯಾದ ಉಡುಪಿ ಬಿಷಪ್ ಲೆಸ್ಲಿ ಸಿ ಡಿಸೋಜಾ ಉಡುಪಿ: ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ…

13 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಮುಷ್ಕರ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರ ಮುಷ್ಕರ ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರ ಸಂಘಟನೆಗಳು…

14 hours ago

ಉಡುಪಿ : ಗಣೇಶೋತ್ಸವ ಸಮಿತಿ ಸದಸ್ಯರ ಪೂರ್ವಭಾವಿ ಸಭೆ – vishwanews24

ಉಡುಪಿ : ಗಣೇಶೋತ್ಸವ ಸಮಿತಿ ಸದಸ್ಯರ ಪೂರ್ವಭಾವಿ ಸಭೆ ಉಡುಪಿ : ಟೌನ್ ಹಾಲ್‌ನಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಜಂಟಿ…

14 hours ago

ಬೆಳ್ತಂಗಡಿ : ಯುವತಿ ಆತ್ಮಹತ್ಯೆ – vishwanews24

ಬೆಳ್ತಂಗಡಿ : ಬಾವಿಗೆ ಹಾರಿ ಯುವತಿ ಆತ್ಮಹತ್ಯೆ ಬೆಳ್ತಂಗಡಿ : ಪುದುವೆಟ್ಟು ಗ್ರಾಮದ ಮಿಯಾರು ನಿವಾಸಿ ಯುವತಿಯೊಬ್ಬಳು ಮನೆಯ ಬಾವಿಗೆ…

14 hours ago