Featured

ಕರ್ತವ್ಯದ ವೇಳೆ ಮೃತಪಟ್ಟಿದ್ದ ಯೋಧನ ಪಾರ್ಥಿವ ಶರೀರ ಮಂಗಳೂರಿಗೆ- ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ.. Vishwanews24

ಕರ್ತವ್ಯದ ವೇಳೆ ಮೃತಪಟ್ಟಿದ್ದ ಯೋಧನ ಪಾರ್ಥಿವ ಶರೀರ ಮಂಗಳೂರಿಗೆ- ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ..

ಮಂಗಳೂರು: ಭೋಪಾಲ್‌ನಲ್ಲಿ ಕರ್ತವ್ಯದ ವೇಳೆ ಸೋಮವಾರ ಹೃದಯಾಘಾತದಿಂದ ಮೃತಪಟ್ಟ ನಗರದ ಯೋಧ ಮುರಳೀಧರ್ ಬಿ.ಎಸ್. (37) ಅವರ ಪಾರ್ಥಿವ ಶರೀರ ವಿಮಾನದ ಮೂಲಕ ಮಂಗಳೂರಿಗೆ ತರಲಾಗಿದೆ.

ವಿಮಾನ ನಿಲ್ದಾಣದ ಹುತಾತ್ಮ ಸ್ಮಾರಕದಲ್ಲಿ ಯೋಧ ಮುರಳೀಧರ್‌ರ ಪಾರ್ಥೀವ ಶರೀರಕ್ಕೆ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ದ.ಕ.ಜಿಪಂ ಸಿಇಒ ಡಾ.ಕುಮಾರ್, ಮಂಗಳೂರು ಉಪವಿಭಾಗಾಧಿಕಾರಿ ಮದನ್‌ಮೋಹನ್, ಅಧಿಕಾರಿ ವರ್ಗ ಜಿಲ್ಲಾಡಳಿತ ವತಿಯಿಂದ ಗೌರವ ಸಲ್ಲಿಸಿದರು.

ಮೃತ ಯೋಧ ಮುರಳಿಧರ ಪತ್ನಿ ಮತ್ತು ಮಗು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ನಗರದ ಪದವು ಗ್ರಾಮದ ಶಕ್ತಿನಗರ ಮೊಗರೋಡಿ ನಿವಾಸಿಯಾಗಿದ್ದ ಮುರಳೀಧರ್ 2007ರಲ್ಲಿ ಸಶಸ್ತ್ರ ಸೀಮಾ ಪಡೆಗೆ ಸೇರಿದ್ದರು.

ಆರು ತಿಂಗಳ ಹಿಂದೆ ಊರಿಗೆ ಬಂದಿದ್ದ ಅವರು ವರ್ಷದ ಹಿಂದೆ ಅಗಲಿದ್ದ ತನ್ನ ತಾಯಿಯ ಮೊದಲ ವರ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೆಲವೇ ದಿನಗಳಲ್ಲಿ ಊರಿಗೆ ಮರಳುವವರಿದ್ದರು.

ಅದಕ್ಕಾಗಿ 20 ದಿನಗಳ ರಜೆಯೂ ಮಂಜೂರಾಗಿತ್ತು. ಊರಿಗೆ ಮರಳಲು ತಯಾರಿ ನಡೆಸುತ್ತಿದ್ದಾಗಲೇ ಹೃದಯಾಘಾತವಾಗಿದೆ ಎಂದು ಮುರಳೀಧರರ ಕುಟುಂಬದ ಮೂಲಗಳು ತಿಳಿಸಿವೆ.

ಇಂದು ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

4 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

4 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

5 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

5 hours ago