ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

Featured, ರಾಜ್ಯ ನ್ಯೂಸ್

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು

ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್ ಕರ್ತವ್ಯದ ವೇಳೆಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ದೇವದುರ್ಗ ಸಿಪಿಐ ವಾಹನ ಚಾಲಕ ರೇಣುಕಾರಾಜ (38) ಮೃತ ದುರ್ದೈವಿ. ಮೊಹರಂ ಭದ್ರತೆ ಹಿನ್ನೆಲೆ ಮದರಕಲ್ ಬಂದೋಬಸ್ತ್ ಕರ್ತವ್ಯದಲ್ಲಿದ್ದರು. ಜೀಪ್ ಚಾಲನೆ ವೇಳೆಯೇ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಖಾಸಗಿ ಕಾರಿನಲ್ಲಿ ದೇವದುರ್ಗಕ್ಕೆ ರವಾನಿಸಲಾಯಿತಾದರೂ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: 

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ಲಿಂಗಸುಗೂರು ತಾಲೂಕಿನ ಅಮದಿಹಾಳ ಗ್ರಾಮದ ರೇಣುಕಾರಾಜ 2008ನೇ ಬ್ಯಾಚ್‌ನ ಪೊಲೀಸ್ ಕಾನ್ಸ್‌ಟೇಬಲ್ ಆಗಿದ್ದು, ಡಿಎಆರ್ ಸಿಪಿಐ ವಾಹನ ಚಾಲಕರಾಗಿದ್ದರು. ಹೃದಯಾಘಾತದಿಂದ ಕರ್ತವ್ಯನಿರತ ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವನ್ನಪ್ಪಿದ್ದು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.

Leave a Reply