ಬೀದರ್ : ಕರ್ತವ್ಯದ ವೇಳೆಯೇ ಪೊಲೀಸ್ ಪೇದೆಗೆ ಹೃದಯಾಘಾತ ಸಂಭವಿಸಿದ್ದು, ಕೆಲವೇ ಕ್ಷಣಗಳಲ್ಲಿ ಪೊಲೀಸ್ ಸಾವಿಗೀಡಾಗಿರುವ ಘಟನೆ ಬೀದರ್‌ನ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ರಾಯಚೂರು ಮೂಲದ ಯುವಕ ಕಳೆದ 5 ವರ್ಷದ ಹಿಂದೆ ಪೊಲೀಸ್ ಪೆದೆಯಾಗಿ ಬೀದರ್‌ಗೆ ನೇಮಕಗೊಂಡಿದ್ದಾನೆ. ತಂದೆ, ತಾಯಿ ಕುಟುಂಬವನ್ನೆಲ್ಲಾ ಬಿಟ್ಟು ಬೀದರ್‌ನ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದನು. ಆದರೆ, ಗಾಂಧಿ ಜಯಂತಿಯ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೊಲೀಸ್ ಆನ್ ಡ್ಯೂಟಿಯಲ್ಲಿದ್ದಾಗಲೇ ಹಾರ್ಟ್ ಅಟ್ಯಾಕ್‌ಗೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಪೊಲೀಸ್ ಪೇದೆ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತ ಪೊಲೀಸ್ ಪೇದೆ ಚಂದ್ರಶೇಖರ್ (28) ಆಗಿದ್ದಾರೆ. ಇವರು ರಾಯಚೂರು ತಾಲೂಕಿನ ತಲಮಾರಿ ಗ್ರಾಮದವರಾಗಿದ್ದರು. 2018ರ ಬ್ಯಾಚ್‌ನಲ್ಲಿ ಪೊಲೀಸ್ ಇಲಾಖೆಗೆ ನೇಮಕವಾಗಿದ್ದರು. ಕಳೆದ 5 ವರ್ಷಗಳಿಂದ ನಾಗರಿಕ ಪೊಲೀಸ್ ಪೇದೆಯಾಗಿ ಬೀದರ್ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…