ಉಡುಪಿ: ದಲಿತ ಕುಟುಂಬದ ಮನೆಗೆ ತೆರಳುವ ಸರಕಾರಿ ರಸ್ತೆಯನ್ನು (ಉದ್ಯಾವರ ಗ್ರಾಮದ ಪಿತ್ರೋಡಿ ) ಅತಿಕ್ರಮಣ ಮಾಡಿರುವ ಬಗ್ಗೆ ತಾಲ್ಲೂಕು ಮೋಜಣಿದಾರರು ಒತ್ತುವರಿ ಖಚಿತಪಡಿಸಿ ನಕ್ಷೆ ಸಹಿತ ವರದಿ ನೀಡಿದ್ದರೂ, ಮುಕ್ತ ಸಂಚಾರವನ್ನು ಪ್ರತಿಬಂಧಿಸಿ ದಲಿತ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಒತ್ತುವರಿ ತೆರವುಗೊಳಿಸದೆ ಗಂಭೀರ ಕರ್ತವ್ಯಲೋಪ ಎಸಗಿದ ಉಡುಪಿ ತಹಶೀಲ್ದಾರ್ ವಿರುದ್ಧ ಕ್ರಮಕೈಗೊಳ್ಳುವಂತೆ ದಲಿತ ಹಕ್ಕುಗಳ ಸಮಿತಿ ಜಿಲ್ಲಾಧ್ಯಕ್ಷರಾದ ಸಂಜೀವ ಬಳ್ಕೂರು ಅವರು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರನ್ನು ಆಗ್ರಹಿಸಿದರು.
ಬೈಂದೂರು ತಾಲ್ಲೂಕು ನಾಡ ಗ್ರಾಮದಲ್ಲಿ ಹಲವು ದಶಕಗಳು ಕಳೆದರೂ ಸರಕಾರಿ ಜಮೀನು ಮಂಜೂರಾತಿಯಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸುವಂತೆ ಹಾಗೂ ಉಡುಪಿ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಲಭ್ಯ ಸರಕಾರಿ ಜಮೀನುಗಳಲ್ಲಿ ಶೇ. ೫೦ ರಷ್ಟನ್ನು ದಲಿತರಿಗೆ ಮೀಸಲಿಡುವಂತೆ ಅವರು ಈ ಸಂದರ್ಭ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.
ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಕವಿರಾಜ್, ಬೈಂದೂರು ವಲಯ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ, ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಸಮಿತಿಯ ಮುಖಂಡರಾದ ನಾಗರತ್ನ ನಾಡ, ರಂಗನಾಥ ಕೊರಂಗರಪಾಡಿ, ನಾಗರತ್ನ ಆರ್., ನಾಡ ಗ್ರಾಮದ ಭೂ ರಹಿತ ದಲಿತ ಮಹಿಳೆಯರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…