Featured

ಕರ್ತವ್ಯಲೋಪ ಆರೋಪ: ಉಡುಪಿ ತಹಶೀಲ್ದಾರ್ ವಿರುದ್ಧ ಡಿಸಿಗೆ ದೂರು – vishwanews24

ಕರ್ತವ್ಯಲೋಪ ಆರೋಪ: ಉಡುಪಿ ತಹಶೀಲ್ದಾರ್ ವಿರುದ್ಧ ಡಿಸಿಗೆ ದೂರು

ಉಡುಪಿ: ದಲಿತ ಕುಟುಂಬದ ಮನೆಗೆ ತೆರಳುವ ಸರಕಾರಿ ರಸ್ತೆಯನ್ನು (ಉದ್ಯಾವರ ಗ್ರಾಮದ ಪಿತ್ರೋಡಿ ) ಅತಿಕ್ರಮಣ ಮಾಡಿರುವ ಬಗ್ಗೆ ತಾಲ್ಲೂಕು ಮೋಜಣಿದಾರರು ಒತ್ತುವರಿ ಖಚಿತಪಡಿಸಿ ನಕ್ಷೆ ಸಹಿತ ವರದಿ ನೀಡಿದ್ದರೂ, ಮುಕ್ತ ಸಂಚಾರವನ್ನು ಪ್ರತಿಬಂಧಿಸಿ ದಲಿತ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಒತ್ತುವರಿ ತೆರವುಗೊಳಿಸದೆ ಗಂಭೀರ ಕರ್ತವ್ಯಲೋಪ ಎಸಗಿದ ಉಡುಪಿ ತಹಶೀಲ್ದಾರ್ ವಿರುದ್ಧ  ಕ್ರಮಕೈಗೊಳ್ಳುವಂತೆ ದಲಿತ ಹಕ್ಕುಗಳ ಸಮಿತಿ ಜಿಲ್ಲಾಧ್ಯಕ್ಷರಾದ ಸಂಜೀವ ಬಳ್ಕೂರು ಅವರು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.  ಅವರನ್ನು ಆಗ್ರಹಿಸಿದರು.

ಬೈಂದೂರು ತಾಲ್ಲೂಕು ನಾಡ ಗ್ರಾಮದಲ್ಲಿ ಹಲವು ದಶಕಗಳು ಕಳೆದರೂ ಸರಕಾರಿ ಜಮೀನು ಮಂಜೂರಾತಿಯಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ದಲಿತ ಕುಟುಂಬಗಳಿಗೆ ನ್ಯಾಯ ಒದಗಿಸುವಂತೆ ಹಾಗೂ ಉಡುಪಿ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಲಭ್ಯ ಸರಕಾರಿ ಜಮೀನುಗಳಲ್ಲಿ ಶೇ. ೫೦ ರಷ್ಟನ್ನು ದಲಿತರಿಗೆ ಮೀಸಲಿಡುವಂತೆ ಅವರು ಈ ಸಂದರ್ಭ ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದರು.

ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಕವಿರಾಜ್, ಬೈಂದೂರು ವಲಯ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ, ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಸಮಿತಿಯ ಮುಖಂಡರಾದ ನಾಗರತ್ನ ನಾಡ, ರಂಗನಾಥ ಕೊರಂಗರಪಾಡಿ, ನಾಗರತ್ನ ಆರ್., ನಾಡ ಗ್ರಾಮದ ಭೂ ರಹಿತ ದಲಿತ ಮಹಿಳೆಯರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

11 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

14 hours ago