Featured

ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಲೇ ಇಲ್ಲ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ :ಯು.ಟಿ ಖಾದರ್ -Vishwanews24

ಮಂಗಳೂರು: ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಲೇ ಇಲ್ಲ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ಟರ್ ನಲ್ಲಿ ಸ್ಪಷ್ಟನೆ ನೀಡಿರುವ ಖಾದರ್ , “ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ. CAB ಕರ್ನಾಟಕದಲ್ಲಿ ಜಾರಿ ಮಾಡಿದರೆ ತೀವ್ರ ವಿರೋಧ ವ್ಯಕ್ತವಾಗಲಿದೆ ಎಂಬರ್ಥದಲ್ಲಿ ಹೇಳಿದ್ದೇನೆ. ತಪ್ಪಾಗಿ ಅರ್ಥೈಸಿಕೊಂಡು ಕಾಲಹರಣ ಮಾಡುವ ಬದಲು ಇತರ ಕೆಲಸದತ್ತ ಗಮನ ಕೊಡಿ”.

“ಅಂದ ಹಾಗೆ ಹೊಸ ಕಾನೂನು ಹುಟ್ಟು ಹಾಕಿ ಉತ್ತರದ ರಾಜ್ಯಗಳಿಗೆ ಬೆಂಕಿ ಇಟ್ಟಿದ್ದೀರಿ. ಇದರ ನಡುವೆ ಆರ್ಥಿಕತೆ ಕುಸಿತದ ಕಥೆ ಎಲ್ಲಿಗೆ ಬಂತು? ಇದರಿಂದ ತಪ್ಪಿಸಿಕೊಳ್ಳಲು ಹೊಸ ಹೊಸ ಕಾನೂನು ಜಾರಿ ಮಾಡುತ್ತಿದೆ ಕೇಂದ್ರ ಸರಕಾರ” ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಡಿ.17 ರಂದು ನಡೆದ ಪೌರತ್ವ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಶಾಸಕ ಖಾದರ್, ಕರ್ನಾಟಕದಲ್ಲಿ ಎಲ್ಲರೂ ಶಾಂತಿ ಸೌಹಾರ್ದತೆ ತಾಳ್ಮೆಯಿಂದ ಇದ್ದಾರೆ. ಕರ್ನಾಟಕದಲ್ಲೂ ಕಾಯ್ದೆ ಅನುಷ್ಠಾನ ಮಾಡ್ತಾರೆ ಎಂಬ ವಿಚಾರ ಕೇಳಿ ಬರುತ್ತಿದೆ. ಒಂದೊಮ್ಮೆ ರಾಜ್ಯದಲ್ಲೂ ಕಾಯ್ದೆ ಜಾರಿಗೆ ಬಂದಲ್ಲಿ ಕರ್ನಾಟಕ ಹೊತ್ತಿ ಉರಿಯಲಿದೆ ಎಂಬ ಹೇಳಿಕೆ ವಿರುದ್ದ ಬಿಜೆಪಿ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago