ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ : ಏ.26 ಹಾಗೂ ಮೇ 7ಕ್ಕೆ ಚುನಾವಣೆ ; ಜೂನ್ 4ಕ್ಕೆ ಮತ ಎಣಿಕೆ – Vishwanews24
ಕರ್ನಾಟಕದಲ್ಲಿ ಏ.26, ಹಾಗೂ ಮೇ 7ಕ್ಕೆ ಚುನಾವಣೆ ; ಜೂನ್ 4ಕ್ಕೆ ಮತ ಎಣಿಕೆ
ನವದೆಹಲಿ: ಲೋಕಸಭಾ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ.
ಏ.26 ಕ್ಕೆ ಮೊದಲ ಹಾಗೂ ಮೇ 7 ಕ್ಕೆ ಎರಡನೇ ಹಂತದ ಮತದಾನ ನಡೆಯಲಿದೆ. ಜೂನ್ 4ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ಮೊದಲ ಹಂತದಲ್ಲಿ ದಕ್ಷಿಣ ಕರ್ನಾಟಕದ 14 ಕ್ಷೇತ್ರ
ಮೊದಲ ಹಂತ: ಉಡುಪಿ- ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಮಂಡ್ಯ, ಬೆಂಗಳೂರು ಉತ್ತರ, ಗ್ರಾಮಾಂತರ, ದಕ್ಷಿಣ, ಸೆಂಟ್ರಲ್, ಕೋಲಾರ, ಹಾಸನ, ತುಮಕೂರು
ಎರಡನೇ ಹಂತ:- ರಾಯಚೂರು, ಬಿಜಾಪುರ, ಶಿವಮೊಗ್ಗ, ದಾವಣಗೆರೆ, ಕೊಪ್ಪಳ, ಬೀದರ್, ಕಲಬುರಗಿ, ಉತ್ತರ ಕನ್ನಡ, ಧಾರವಾಡ, ಬಳ್ಳಾರಿ, ಚಿಕ್ಕೋಡಿ, ಹಾವೇರಿ, ಬೆಳಗಾವಿ,ಬಾಗಲಕೋಟೆ
