ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಸಂದೇಶ ರವಾನಿಸಬೇಕು :ಹೆಚ್‌.ಡಿ.ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಸಂದೇಶ ರವಾನಿಸಬೇಕು :ಹೆಚ್‌.ಡಿ.ಕುಮಾರಸ್ವಾಮಿ -Vishwanews24

ಬೆಂಗಳೂರು,: “ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಇದರಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಆ ಮೂಲಕ ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎಂಬ ಸಂದೇಶ ರವಾನಿಸಬೇಕು” ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ ನಮ್ಮ ಧ್ವಜ ಹಾರಿಸಲು ಹರಸಾಹಸಪಡುವುದು, ಅದಕ್ಕೆ ಕಾವಲು ಕಾಯುವುದು, ಧ್ವಜ ತೆರವು ಮಾಡದಂತೆ ಅಧಿಕಾರಿಗಳಲ್ಲಿ ಮನವಿ ಮಾಡುವುದು ಇವೆಲ್ಲವೂ ಕನ್ನಡಿಗರ ಸ್ವಾಭಿಮಾನಕ್ಕೆ ಉಂಟಾದ ಧಕ್ಕೆ” ಎಂದಿದ್ದಾರೆ.

 

“ಕನ್ನಡಿಗರ ಭಾವೈಕ್ಯದ ಸಂಕೇತವಾಗಿರುವ ಕನ್ನಡ ಧ್ವಜ ಡಿ.31ರ ಒಳಗಾಗಿ ತೆರವು ಗೊಳಿಸಬೇಕು ಎಂದು ಹೇಳಿದಾಗಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು. ಈಗ ಕನ್ನಡ ಹೋರಾಟಗಾರರ ಮೇಲೆ ದಾಳಿಯ ಪ್ರಯತ್ನಗಳು ನಡೆಯುತ್ತಿವೆ. ಕರ್ನಾಟಕದಲ್ಲಿ ಕನ್ನಡಿಗರಿಗೇ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು ಎಂದು ಹೇಳಿದ್ದಾರೆ.

ಎದೆನೋವು : ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು -Vishwanews24