ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಎಲೆಕ್ಷನ್ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಗೆಲುವಿಗಾಗಿ ಬಿಜೆಪಿ ರಣತಂತ್ರ ಎಣೆಯುತ್ತಿದ್ದು, ಈಗಾಗಲೇ ನಿಗದಿತ ತಂಡವೊಂದು ಚುನಾವಣೆಯಲ್ಲಿ ಪಕ್ಷದ ಪರವಾದ ವಾತಾವರಣ ಸೃಷ್ಟಿಸುವ ಸಲುವಾಗಿ ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಇದರ ಹೊರತಾಗಿಯೂ ಬಿಜೆಪಿಗೆ ಒಂದಿಷ್ಟು ಕ್ಷೇತ್ರಗಳು ಸವಾಲಾಗಿ ಪರಿಣಮಿಸಿದ್ದು, ಅವುಗಳನ್ನು ಗೆಲ್ಲಲು ವಿಶೇಷ ಕಾರ್ಯತಂತ್ರವನ್ನು ಕೇಸರಿ ಪಾಳಯದ ನಾಯಕರು ರೂಪಿಸುತ್ತಿದ್ದಾರೆ.
ಈಗಾಗಲೇ ಬಿಜೆಪಿ ಹೈಕಮಾಂಡ್ ಕೆಲವು ನಿರ್ದಿಷ್ಟ ಕ್ಷೇತ್ರಗಳನ್ನು ಗುರುತಿಸಿದ್ದು, ಅಲ್ಲಿ ಒಂದಿಷ್ಟು ಆಂತರಿಕ ಸವಾಲುಗಳನ್ನು ಬಿಜೆಪಿ ಎದುರಿಸುತ್ತಿದೆ. ಜೊತೆಗೆ ಬಿಜೆಪಿ – ಜೆಡಿಎಸ್ ಮೈತ್ರಿ ಒಗ್ಗಟ್ಟಿಗೆ ಅಡ್ಡಿಯಾಗುವ ಅಂಶಗಳನ್ನು ಕೂಡ ನಾಯಕರು ಕಂಡುಕೊಂಡಿದ್ದಾರೆ. ಈ ಸವಾಲುಗಳನ್ನು ಬಗೆಹರಿಸಲು ಸಾಧ್ಯವಿರುವ ಅಭ್ಯರ್ಥಿಗಳನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಹಳೇ ಮೈಸೂರು ಪ್ರಾಂತ್ಯದಲ್ಲಿ ಆಡಳಿತ ವಿರೋಧಿ ಅಲೆಯನ್ನು ಗೆಲುವಾಗಿ ಪರಿವರ್ತಿಸುವ ಅಭ್ಯರ್ಥಿಗಳನ್ನು ಹುಡುಕಲಾಗುತ್ತಿದ್ದು, ಆಪರೇಷನ್ ಕಮಲದ ಪ್ರಯತ್ನವೂ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿಗೆ ಪ್ರಮುಖವಾಗಿ ಸವಾಲಾಗಿರುವ ಕ್ಷೇತ್ರ ಎಂದರೆ ಅದು ಚಿಕ್ಕಬಳ್ಳಾಪುರ. ಚಿಕ್ಕಬಳ್ಳಾಪುರದ ಹಾಲಿ ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ ವಯಸ್ಸಿನ ಕಾರಣ ನೀಡಿ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಅದಲ್ಲದೇ ಅವರ ಪುತ್ರ ಶರತ್ ಬಚ್ಚೇಗೌಡ ಹೊಸಕೋಟೆಯಿಂದ ಕಾಂಗ್ರೆಸ್ ಶಾಸಕರಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಹಿನ್ನೆಲೆ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ನಾಯಕ ಶಿವಶಂಕರ್ ರೆಡ್ಡಿ ಅವರನ್ನು ಬಿಜೆಪಿಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಹಾಲಿ ಸಂಸದ ಡಿಕೆ ಸುರೇಶ್ ಅವರೇ ಮರು ಅಭ್ಯರ್ಥಿಯಾಗುವುದು ಖಚಿತವಾಗಿದೆ. ಡಿಕೆ ಬ್ರದರ್ಸ್ ಕೋಟೆಯನ್ನು ಭೇದಿಸಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಅಳಿಯ ಹಾಗೂ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಅವರನ್ನು ಕಣಕ್ಕಿಳಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಆದರೆ, ಸಿಎನ್ ಮಂಜುನಾಥ್ ಅವರು ಬಿಜೆಪಿಯಿಂದ ಕಣಕ್ಕಿಳಿಯುತ್ತಾರೋ, ಜೆಡಿಎಸ್‌ನಿಂದ ಕಣಕ್ಕಿಳಿಯುತ್ತಾರೋ ಎಂಬುದು ಪ್ರಶ್ನೆಯಾಗಿದೆ. ಇದರ ಜೊತೆ ಮಾಜಿ ಸಚಿವ ಸಿಪಿ ಯೋಗೀಶ್ವರ್ ಕೂಡ ರೇಸ್‌ನಲ್ಲಿದ್ದಾರೆ.
ಇನ್ನು, ಹಳೇ ಮೈಸೂರು ಪ್ರಾಂತ್ಯದಲ್ಲಿ ಮೈಸೂರು-ಕೊಡಗು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳಿದ್ದು, ನಾಲ್ಕು ಕ್ಷೇತ್ರಗಳು ಬಿಜೆಪಿಗೆ ಸವಾಲಾಗಿ ಪರಿಣಮಿಸಿವೆ ಎನ್ನಲಾಗಿದೆ. ಅದರಲ್ಲೂ ಚಾಮರಾಜನಗರ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ನಿವೃತ್ತಿ ಘೋಷಿಸಿದ್ದಾರೆ. ಈ ಹಿನ್ನೆಲೆ ಹೊಸ ಅಭ್ಯರ್ಥಿಯನ್ನು ಹಾಕಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ. ಅದಲ್ಲದೇ 2023ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಸಾಧಿಸಿರುವುದರಿಂದ ಕೇಸರಿ ಪಡೆಗೆ ಇಲ್ಲಿ ಪ್ರಬಲ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.
ಇನ್ನು, ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮತ್ತೊಂದು ಬಾರಿ ಪ್ರತಾಪ್ ಸಿಂಹ ಬಿಜೆಪಿ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ. ಆದರೆ, ಹೊಸ ಮುಖಕ್ಕೆ ಟಿಕೆಟ್ ನೀಡಬೇಕು ಎಂಬ ಚಿಂತನೆಯಲ್ಲಿ ಬಿಜೆಪಿ ನಾಯಕರು ಇದ್ದಾರೆ ಎಂದು ಹೇಳಲಾಗುತ್ತಿದೆ. ಅದಲ್ಲದೇ ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಕಣಕ್ಕಿಳಿದರೆ ಬಿಜೆಪಿಯ ಗೆಲುವು ಕಷ್ಟವಾಗಬಹುದು ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…