Featured

ಕರ್ನಾಟಕದಲ್ಲಿ ಗೆಲುವಿಗಾಗಿ ರಣತಂತ್ರವನ್ನೇ ಬದಲಾಯಿಸಿದ ಬಿಜೆಪಿ – ಹೊಸ ಮುಖಗಳಿಗೆ ಮಣೆ ಹಾಕಲು ಚಿಂತನೆ- Vishwanews24

ಕರ್ನಾಟಕದಲ್ಲಿ  ಗೆಲುವಿಗಾಗಿ ರಣತಂತ್ರವನ್ನೇ ಬದಲಾಯಿಸಿದ ಬಿಜೆಪಿ ; ಆಪರೇಷನ್‌ ಕಮಲದ ಪ್ರಯತ್ನ – ಹೊಸ ಮುಖಗಳಿಗೆ ಮಣೆ ಹಾಕಲು ಚಿಂತನೆ

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಎಲೆಕ್ಷನ್‌ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಗೆಲುವಿಗಾಗಿ ಬಿಜೆಪಿ ರಣತಂತ್ರ ಎಣೆಯುತ್ತಿದ್ದು,  ಈಗಾಗಲೇ ನಿಗದಿತ ತಂಡವೊಂದು ಚುನಾವಣೆಯಲ್ಲಿ ಪಕ್ಷದ ಪರವಾದ ವಾತಾವರಣ ಸೃಷ್ಟಿಸುವ ಸಲುವಾಗಿ ಬೂತ್‌ ಮಟ್ಟದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಇದರ ಹೊರತಾಗಿಯೂ ಬಿಜೆಪಿಗೆ ಒಂದಿಷ್ಟು ಕ್ಷೇತ್ರಗಳು ಸವಾಲಾಗಿ ಪರಿಣಮಿಸಿದ್ದು, ಅವುಗಳನ್ನು ಗೆಲ್ಲಲು ವಿಶೇಷ ಕಾರ್ಯತಂತ್ರವನ್ನು ಕೇಸರಿ ಪಾಳಯದ ನಾಯಕರು ರೂಪಿಸುತ್ತಿದ್ದಾರೆ.

ಈಗಾಗಲೇ ಬಿಜೆಪಿ ಹೈಕಮಾಂಡ್‌ ಕೆಲವು ನಿರ್ದಿಷ್ಟ ಕ್ಷೇತ್ರಗಳನ್ನು ಗುರುತಿಸಿದ್ದು, ಅಲ್ಲಿ ಒಂದಿಷ್ಟು ಆಂತರಿಕ ಸವಾಲುಗಳನ್ನು ಬಿಜೆಪಿ ಎದುರಿಸುತ್ತಿದೆ. ಜೊತೆಗೆ ಬಿಜೆಪಿ – ಜೆಡಿಎಸ್‌ ಮೈತ್ರಿ ಒಗ್ಗಟ್ಟಿಗೆ ಅಡ್ಡಿಯಾಗುವ ಅಂಶಗಳನ್ನು ಕೂಡ ನಾಯಕರು ಕಂಡುಕೊಂಡಿದ್ದಾರೆ. ಈ ಸವಾಲುಗಳನ್ನು ಬಗೆಹರಿಸಲು ಸಾಧ್ಯವಿರುವ ಅಭ್ಯರ್ಥಿಗಳನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಹಳೇ ಮೈಸೂರು ಪ್ರಾಂತ್ಯದಲ್ಲಿ ಆಡಳಿತ ವಿರೋಧಿ ಅಲೆಯನ್ನು ಗೆಲುವಾಗಿ ಪರಿವರ್ತಿಸುವ ಅಭ್ಯರ್ಥಿಗಳನ್ನು ಹುಡುಕಲಾಗುತ್ತಿದ್ದು, ಆಪರೇಷನ್‌ ಕಮಲದ ಪ್ರಯತ್ನವೂ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಗೆ ಪ್ರಮುಖವಾಗಿ ಸವಾಲಾಗಿರುವ ಕ್ಷೇತ್ರ ಎಂದರೆ ಅದು ಚಿಕ್ಕಬಳ್ಳಾಪುರ. ಚಿಕ್ಕಬಳ್ಳಾಪುರದ ಹಾಲಿ ಬಿಜೆಪಿ ಸಂಸದ ಬಿಎನ್‌ ಬಚ್ಚೇಗೌಡ ವಯಸ್ಸಿನ ಕಾರಣ ನೀಡಿ ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಅದಲ್ಲದೇ ಅವರ ಪುತ್ರ ಶರತ್‌ ಬಚ್ಚೇಗೌಡ ಹೊಸಕೋಟೆಯಿಂದ ಕಾಂಗ್ರೆಸ್‌ ಶಾಸಕರಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್‌ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಈ ಹಿನ್ನೆಲೆ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್‌ ನಾಯಕ ಶಿವಶಂಕರ್‌ ರೆಡ್ಡಿ ಅವರನ್ನು ಬಿಜೆಪಿಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಹಾಲಿ ಸಂಸದ ಡಿಕೆ ಸುರೇಶ್‌ ಅವರೇ ಮರು ಅಭ್ಯರ್ಥಿಯಾಗುವುದು ಖಚಿತವಾಗಿದೆ. ಡಿಕೆ ಬ್ರದರ್ಸ್‌ ಕೋಟೆಯನ್ನು ಭೇದಿಸಲು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಅಳಿಯ ಹಾಗೂ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ ಸಿಎನ್‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಆದರೆ, ಸಿಎನ್‌ ಮಂಜುನಾಥ್‌ ಅವರು ಬಿಜೆಪಿಯಿಂದ ಕಣಕ್ಕಿಳಿಯುತ್ತಾರೋ, ಜೆಡಿಎಸ್‌ನಿಂದ ಕಣಕ್ಕಿಳಿಯುತ್ತಾರೋ ಎಂಬುದು ಪ್ರಶ್ನೆಯಾಗಿದೆ. ಇದರ ಜೊತೆ ಮಾಜಿ ಸಚಿವ ಸಿಪಿ ಯೋಗೀಶ್ವರ್‌ ಕೂಡ ರೇಸ್‌ನಲ್ಲಿದ್ದಾರೆ.

ಇನ್ನು, ಹಳೇ ಮೈಸೂರು ಪ್ರಾಂತ್ಯದಲ್ಲಿ ಮೈಸೂರು-ಕೊಡಗು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳಿದ್ದು, ನಾಲ್ಕು ಕ್ಷೇತ್ರಗಳು ಬಿಜೆಪಿಗೆ ಸವಾಲಾಗಿ ಪರಿಣಮಿಸಿವೆ ಎನ್ನಲಾಗಿದೆ. ಅದರಲ್ಲೂ ಚಾಮರಾಜನಗರ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರು ನಿವೃತ್ತಿ ಘೋಷಿಸಿದ್ದಾರೆ. ಈ ಹಿನ್ನೆಲೆ ಹೊಸ ಅಭ್ಯರ್ಥಿಯನ್ನು ಹಾಕಬೇಕಾದ ಅನಿವಾರ್ಯತೆ ಬಿಜೆಪಿಗೆ ಇದೆ. ಅದಲ್ಲದೇ 2023ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಸಾಧಿಸಿರುವುದರಿಂದ ಕೇಸರಿ ಪಡೆಗೆ ಇಲ್ಲಿ ಪ್ರಬಲ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.

ಇನ್ನು, ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮತ್ತೊಂದು ಬಾರಿ ಪ್ರತಾಪ್‌ ಸಿಂಹ ಬಿಜೆಪಿ ಅಭ್ಯರ್ಥಿಯಾಗುವ ನಿರೀಕ್ಷೆ ಇದೆ. ಆದರೆ, ಹೊಸ ಮುಖಕ್ಕೆ ಟಿಕೆಟ್‌ ನೀಡಬೇಕು ಎಂಬ ಚಿಂತನೆಯಲ್ಲಿ ಬಿಜೆಪಿ ನಾಯಕರು ಇದ್ದಾರೆ ಎಂದು ಹೇಳಲಾಗುತ್ತಿದೆ. ಅದಲ್ಲದೇ ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಕಣಕ್ಕಿಳಿದರೆ ಬಿಜೆಪಿಯ ಗೆಲುವು ಕಷ್ಟವಾಗಬಹುದು ಎನ್ನಲಾಗಿದೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

7 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

7 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago