ಕರ್ನಾಟಕದಲ್ಲಿ ಜೆಡಿಎಸ್​ ಪಕ್ಷವನ್ನು ಉಳಿಸುವುದಕ್ಕೆ ಲಕ್ಷಾಂತರ ಕಾರ್ಯಕರ್ತರು ದುಡಿದಿದ್ದಾರೆ: ಎಚ್.ಡಿ.ದೇವೇಗೌಡ – Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮುಂದಾಗಿದ್ದೇವೆ. 30 ಜಿಲ್ಲೆಗಳಲ್ಲೂ ಕಾರ್ಯಕರ್ತರ ಸಭೆ ಮಾಡಲು ಯೋಜಿಸಿದ್ದೇವೆ ಎಂದು ಜೆಡಿಎಸ್​ ವರಿಷ್ಠ ಎಚ್.ಡಿ.ದೇವೇಗೌಡ ಅವರು ಹೇಳಿದರು.

ಯಶವಂಶಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರದಾನಿ ಹೆಚ್‌ಡಿ ದೇವೆಗೌಡರು, ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷವನ್ನು ಉಳಿಸುವುದಕ್ಕೆ ಲಕ್ಷಾಂತರ ಕಾರ್ಯಕರ್ತರು ದುಡಿದಿದ್ದಾರೆ. ಕೆಲವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಕಳೆದ ಚುನಾವಣೆಯಲ್ಲಿ ಎಲ್ಲಾ ಮತದಾರರ ಹೋರಾಟದ ಫಲವಾಗಿ ಒಂದು ಲಕ್ಷ ಮತ ಪಡೆದಿದ್ದೇವೆ. ಎಂದು ಹೇಳಿದರು.