ನವದೆಹಲಿ: ಕರ್ನಾಟಕದಲ್ಲಿ ಪ್ರಜಾಪ್ರಭುತ್ವದಲ್ಲಿನ ಪ್ರಾಮಾಣಿಕ ಹೋರಾಟಕ್ಕೆ ಸೋಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ವಿಶ್ವಾಸ ಮತ ಗಳಿಸಲು ಹರ ಸಾಹಸಪಟ್ಟ ಮೈತ್ರಿ ಸರ್ಕಾರ, ವಿಶ್ವಾಸಮತ ಸಾಬೀತು ಪಡಿಸುವಲ್ಲಿ ವಿಫಲವಾದರು. ಹೀಗಾಗಿ ಬಿಜೆಪಿ, ಸರ್ಕಾರ ರಚನೆ ಮಾಡಲು ಎಲ್ಲಾ ರೀತಿಯಾಗಿ ತಯಾರಾಗಿತ್ತು.
ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ “ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ಆರಂಭವಾದ ದಿನದಿಂದಲೂ ಸರ್ಕಾರಕ್ಕೆ ಪಟ್ಟಭದ್ರ ಹಿತಾಸಕ್ತಿಗಳ ಬೆದರಿಕೆ ಇತ್ತು. ಅದರ ನಂತರವೂ ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ತನ್ನ ಅಭಿವೃದ್ಧಿ ಪಥದಲ್ಲಿರುವ ಅಡಚಣೆಗಳನ್ನು ಬೆದರಿಕೆಗಳನ್ನು ಎದುರಿಸಿಕೊಂಡು ಸಾಗುತ್ತಿತ್ತು. ಆದರೆ ಕೊನೆಗೂ ಬಿಜೆಪಿಯ ದುರಾಸೆ ಗೆದ್ದಿದ್ದು, ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಮತ್ತು ಕರ್ನಾಟಕದ ಜನತೆಗೆ ಸೋಲಾಗಿದೆ” ಎಂದು ಹೇಳಿಕೊಂಡಿದ್ದಾರೆ.
ಕಾಂಗ್ರೆಸ್ ಮೈತ್ರಿ ಸರ್ಕಾರದ ಶಾಸಕರಿಗೆ ಬಿಜೆಪಿ ಹಣದ ಆಸೆ ತೋರಿಸಿ, ಅವರನ್ನು ಬೆದರಿಸಿ ರಾಜೀನಾಮೆ ಕೊಡಿಸಿದೆ ಎಂಬ ಆರೋಪ ಮಾಡಿದೆ.
ಬಿಜೆಪಿಯನ್ನು ಅಧಿಕಾರದಿಂದ ಹೊರಗೆ ಇಡಲೇಬೇಕು ಎಂದು ಪಣತೊಟ್ಟಿದ್ದ ಕಾಂಗ್ರೆಸ್ ಈ ಮೈತ್ರಿಗೆ ಸಮ್ಮತಿ ನೀಡಿತ್ತು. ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಅಂದು ಎಐಸಿಸಿ ಅಧ್ಯಕ್ಷರಾಗಿದ್ದ ರಾಹುಲ್ ಗಾಂಧಿ ಕೂಡ ಪ್ರಮುಖಪಾತ್ರ ವಹಿಸಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…