Featured

ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ ರಾಹುಲ್ ಅನರ್ಹತೆಗೆ ತಕ್ಕ ಪ್ರತ್ಯುತ್ತರ ನೀಡಬೇಕು: ಪ್ರಿಯಾಂಕಾ ಗಾಂಧಿ – Vishwanews24

ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ ರಾಹುಲ್ ಅನರ್ಹತೆಗೆ ಪ್ರತ್ಯುತ್ತರ ನೀಡಬೇಕು’: ಪ್ರಿಯಾಂಕಾ ಗಾಂಧಿ

ನವದೆಹಲಿ: ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ. ಆ ಮೂಲಕ ರಾಹುಲ್ ಅನರ್ಹತೆಗೆ ಪ್ರತ್ಯುತ್ತರ ನೀಡಬೇಕು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿಯವರು ಅನರ್ಹಗೊಂಡ ಬೆನ್ನಲ್ಲೇ ದೆಹಲಿಯಲ್ಲಿ ನಡೆದ ಕಾಂಗ್ರೆಸ್ ಮುಖಂಡರ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ಕೆಲವೇ ದಿನಗಳಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಬಹುದು. ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸುವುದು ನಮ್ಮ ತುರ್ತು ಅಗತ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾಂಗ್ರೆಸ್ಸಿಗನೂ ಕೆಲಸ ಮಾಡಬೇಕು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ರಾಹುಲ್ ಅನರ್ಹತೆಗೆ ತಕ್ಕ ಪ್ರತ್ಯುತ್ತರ ನೀಡಬೇಕು ಎಂದರು.

ಇನ್ನು ರಾಹುಲ್ ಅನರ್ಹತೆ ವಿರೋಧಿಸಿ ಕಾಂಗ್ರೆಸ್‌ನ ಎಲ್ಲಾ ಸಂಸದರು ಸಾಮೂಹಿಕ ರಾಜೀನಾಮೆ ನೀಡಬಹುದು ಎಂದೂ ಸಂಸದರೊಬ್ಬರು ಸಲಹೆ ಮಾಡಿದ್ದಾರೆ ಎನ್ನಲಾಗಿದೆ. ಇನ್ನು ಈ ವಿಚಾರದಲ್ಲಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸುವ ಸಲುವಾಗಿ ಸಮಿತಿ ರಚಿಸುವ ಸಾಧ್ಯತೆಯೂ ಇದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ಟೀರಿಂಗ್ ಕಮಿಟಿ, ಪಿಸಿಸಿ ಮುಖ್ಯಸ್ಥರು, ಸಿಎಲ್‌ ಪಿ ನಾಯಕರು ಮತ್ತು ಮುಂಭಾಗದ ಸಂಘಟನೆಗಳು, ಇಲಾಖೆಗಳು ಮತ್ತು ಕೋಶಗಳ ಮುಖ್ಯಸ್ಥರು ಭಾಗವಹಿಸಿದ್ದರು.

ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದು ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದೆ. ದೇಶಾದ್ಯಂತ ಈ ಬೆಳವಣಿಗೆ ವಿರೋಧಿಸಿ ಹೋರಾಟಕ್ಕೆ ಕಾಂಗ್ರೆಸ್ ಮುಂದಾಗಿದೆ.

Vishwa News 24

Recent Posts

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

4 days ago

ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ – vishwanews24

ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…

5 days ago

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ – vishwanews24

ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…

5 days ago

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು – vishwanews24

ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…

5 days ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – vishwanews24

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…

5 days ago