Featured

ಕರ್ನಾಟಕದಲ್ಲಿ ರ‍್ಯಾಪಿಡೋ, ಉಬರ್​ ಬೈಕ್​ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ – vishwanews24

ಕರ್ನಾಟಕದಲ್ಲಿ ರ‍್ಯಾಪಿಡೋ, ಉಬರ್​ ಬೈಕ್​ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ

ಬೆಂಗಳೂರು: ಕರ್ನಾಟಕದಲ್ಲಿನ ರ‍್ಯಾಪಿಡೋ, ಉಬರ್​ ಬೈಕ್​ ಟ್ಯಾಕ್ಸಿ ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶವನ್ನು ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ.

ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸುವಂತೆ ಸರ್ಕಾರಕ್ಕೆ ನಿರ್ದೇಶನ ಕೋರಿ ಊಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಇತರರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಹೈಕೋರ್ಟ್​ ಏಪ್ರಿಲ್ – 2 ರಂದು ಆರು ವಾರದೊಳಗೆ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಆದೇಶವನ್ನು ನೀಡಿತ್ತು.

1988 ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 93 ರ ಅಡಿಯಲ್ಲಿ ಅಗತ್ಯ ನಿಯಮಗಳೊಂದಿಗೆ ಸಂಬಂಧಿತ ಮಾರ್ಗಸೂಚಿಗಳನ್ನು ತಿಳಿಸದ ಹೊರತು ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಆರು ವಾರಗಳ ಒಳಗೆ ಎಲ್ಲಾ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳು ಸ್ಥಗಿತಗೊಳ್ಳುವಂತೆ ನೋಡಿಕೊಳ್ಳಲು ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ಸಾರಿಗೆ ಇಲಾಖೆಗೆ ನಿರ್ದೇಶನವನ್ನು ನೀಡಿತ್ತು.

ಆಗ ಸಚಿವ ರಾಮಲಿಂಗಾ ರೆಡ್ಡಿ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದರು. ಅಗತ್ಯ ನಿಯಮಗಳನ್ನು ರೂಪಿಸಲು ಸರ್ಕಾರಕ್ಕೆ ಮೂರು ತಿಂಗಳುಗಳ ಕಾಲಾವಕಾಶ ನೀಡಲಾಗಿದೆ. ಸದ್ಯ ಹೈಕೋರ್ಟ್ ಆದೇಶ ‌ಕಾರ್ಯಾಗತಗೊಳಿಸಲು ಕ್ರಮಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ನಿನ್ನೆ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟ ಬೈಕ್ ಟ್ಯಾಕ್ಸಿಗಳನ್ನು ನಿಲ್ಲಿಸುವಂತೆ ಆದೇಶ ಮಾಡಲು ಸಚಿವ ರಾಮಲಿಂಗಾರೆಡ್ಡಿಗೆ ಮನವಿ ಮಾಡಲಾಗಿತ್ತು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

17 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago