ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್ ಬ್ಯಾನ್ ಮಾಡಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಪನ್ನೀರ್ ಹೆಸರಿನಲ್ಲಿ ಅನಾಲಾಗ್ ಪನ್ನೀರ್ ತಯಾರಿಕೆ, ಸಂಗ್ರಹಣೆ , ಮಾರಾಟವಾಗುತ್ತಿದೆ. ಕೃತಕ ಪನ್ನೀರ್ ನಿಷೇಧ ಮಾಡಿ ಆದೇಶಿಸಲಾಗಿದೆ.
ಸಾಮಾನ್ಯವಾಗಿ ಅಸಲಿ ಪನ್ನೀರ್ ಅನ್ನು ಸಂಪೂರ್ಣವಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳಿಂದ ತಯಾರಿಸಲಾಗುತ್ತದೆ. ಆದರೆ, ವೆಚ್ಚ ಕಡಿಮೆ ಮಾಡಲು ಮತ್ತು ಹೆಚ್ಚಿನ ಲಾಭ ಗಳಿಸಲು ಹಲವು ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳು ಹಾಲಿನ ಬದಲು ಸಸ್ಯಜನ್ಯ ಎಣ್ಣೆ, ಪಿಷ್ಟ ಹಾಗೂ ಕೆಮಿಕಲ್‌ಗಳನ್ನು ಬಳಸಿ ತಯಾರಿಸಿದ ‘ಅನಲಾಗ್ ಪನ್ನೀರ್’ ಅನ್ನು ಗ್ರಾಹಕರಿಗೆ ನೀಡುತ್ತಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
ಕೃತಕ ಪನ್ನೀರ್‌ನಲ್ಲಿ ಬಳಸುವ ರಾಸಾಯನಿಕಗಳು ಮತ್ತು ಗುಣಮಟ್ಟವಿಲ್ಲದ ಕೊಬ್ಬಿನಾಂಶ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ತರಹದ ಅಡ್ಡಪರಿಣಾಮಗಳನ್ನು ಉಂಟುಮಾಡುತ್ತಿವೆ. ಆಹಾರ ಸುರಕ್ಷತಾ ಕಾಯ್ದೆಯಡಿ ಹಾಲಿನ ಉತ್ಪನ್ನವಲ್ಲದ ಕೃತಕ ವಸ್ತುವನ್ನು ‘ಪನ್ನೀರ್’ ಹೆಸರಿನಲ್ಲಿ ಗ್ರಾಹಕರಿಗೆ ನೀಡುವುದು ಕಾನೂನುಬಾಹಿರ.ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.
ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ : ಸಂಸದ ಕ್ಯಾ. ಬ್ರಿಜೇಶ್ ಚೌಟ…
ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ…
ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ ಚಿಕ್ಕಮಗಳೂರು: ಕೃಷಿ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಇಲ್ಲ ಸುಬ್ರಹ್ಮಣ್ಯ: ಕುಕ್ಕೆ…
ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ ಉಡುಪಿ : ರಾಜ್ಯ ಸರ್ಕಾರದ ಆದೇಶದಂತೆ ಕುಂದಾಪುರ…
ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ…