ಉಡುಪಿ : ಚುನಾವಣೋತ್ತರ ಸಮೀಕ್ಷೆ ದೇಶಾದ್ಯಂತ ಸಂಚಲನ ಮೂಡಿಸಿದ್ದು, ಈ ಬಾರಿ ಲೋಕಸಮರದಲ್ಲಿ ಬಿಜೆಪಿ 350 ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ನಿಜವಾಗಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳಿಗೆ ಕಡಿವಾಣ ಹಾಕುವುದಾಗಿ ಸಿಎಂ ಹೇಳಿಕೆ ವಿಚಾರ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೋತ್ತರ ಸಮೀಕ್ಷೆಯಿಂದ ರಾಷ್ಟ್ರಾದ್ಯಂತ ಸಂಚಲನ ಸೃಷ್ಟಿಯಾಗಿದೆ. 350ಕ್ಕೂ ಅಧಿಕ ಸ್ಥಾನ ಪಡೆಯುವ ನಮ್ಮ ನಿರೀಕ್ಷೆ ನಿಜವಾಗಿದೆ. ದೇಶದಲ್ಲಿ ಮಹಾಮೈತ್ರಿ ನುಚ್ಚುನೂರಾಗಲಿದೆ. ಕರ್ನಾಟಕದಲ್ಲಿ 22ಕ್ಕೂ ಅಧಿಕ ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಮಮತಾ ಬ್ಯಾನರ್ಜಿಗೆ ಈ ದೇಶದ ಮತದಾರರ ಮೇಲೆ ನಂಬಿಕೆಯೇ ಇಲ್ಲ. ಹಾಗಾಗಿ ಮತಯಂತ್ರದ ಮೇಲೂ ನಂಬಿಕೆ ಇಲ್ಲ. ಆದರೆ, ಅವರು ಗೆದ್ದರೆ ಎಲ್ಲವೂ ಸರಿ ಇದೆ ಎನ್ನುತ್ತಾರೆ. ಸೋಲಿನ ಭೀತಿಯಿಂದ ಮಮತಾ ಬ್ಯಾನರ್ಜಿಗೆ ಈ ಅಪನಂಬಿಕೆ ಮೂಡಿದೆ. ಇದು ಪ್ರಜಾಪ್ರಭುತ್ವದಲ್ಲಿ ಶೋಭೆ ತರುವುದಿಲ್ಲ ಎಂದು ಟೀಕಿಸಿದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…