Featured

ಕರ್ನಾಟಕದಲ್ಲಿ 4,67,580 ಮನೆಗಳನ್ನು ಕಟ್ಟಲು ಕೇಂದ್ರ ಒಪ್ಪಿಗೆ : ಕೇಂದ್ರ ಸಚಿವ ಚೌಹಾಣ್ – vishwanews24

ಕರ್ನಾಟಕದಲ್ಲಿ 4,67,580 ಮನೆಗಳನ್ನು ಕಟ್ಟಲು ಕೇಂದ್ರ ಒಪ್ಪಿಗೆ : ಕೇಂದ್ರ ಸಚಿವ ಚೌಹಾಣ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕರ್ನಾಟಕದ ವಿಕಾಸಕ್ಕೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಬಿಡುಗಡೆ ಮಾಡಿರುವ ಅನುದಾನದ ಸದ್ಬಳಕೆ ಆಗಬೇಕಿದೆ. ಪ್ರತಿ ಬಡವನಿಗೂ ಮನೆ ಸಿಗಬೇಕು ಎಂಬುದು ಮೋದಿಯವರ ಸಂಕಲ್ಪ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕಳೆದ ಸೆಪ್ಟೆಂಬರ್‍ನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ ಕೊಟ್ಟಿದ್ದೆವು. ಅನುದಾನವನ್ನೂ ಕೊಟ್ಟಿದ್ದೆವು. ಇಂದು ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಇರುವ ಗುರಿ ಹೆಚ್ಚಿಸಲಾಗಿದೆ ಎಂದು ವಿವರಿಸಿದರು.ಇಂದು 4,67,580 ಮನೆಗಳನ್ನು ಕಟ್ಟಲು ಒಪ್ಪಿಗೆ ಕೊಟ್ಟಿದ್ದೇವೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.

ಬೆಂಗಳೂರಿಗೆ ಬಂದಿರುವ ಕೇಂದ್ರ ಸಚಿವರು ಇಂದು ರಾಜ್ಯದ ಕೃಷಿ, ಗ್ರಾಮೀಣಾಭಿವೃದ್ಧಿ, ಕಂದಾಯ ಸಚಿವರ ಜೊತೆ ಕೇಂದ್ರ ಸರಕಾರದ ಯೋಜನೆಗಳ ಸಾಧನೆಯನ್ನು ಪರಿಶೀಲಿಸಿದರು. ನಂತರ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್ ಅವರು ಅನುದಾನ ಕೇಳದೇ ಇದ್ದರೂ ನಾವೇ ಘೋಷಣೆ ಮಾಡಿದ್ದೇವೆ. ಬಹಳಷ್ಟು ಅನುದಾನ ಈಗಾಗಲೇ ಕೊಟ್ಟಿದ್ದು, ಅದನ್ನು ಇನ್ನೂ ಕರ್ನಾಟಕ ಸರ್ಕಾರ ಖರ್ಚು ಮಾಡಿಲ್ಲ ಎಂದರು.

ಬಡವರ ಸೇವೆಯೇ ಭಗವಂತನ ಸೇವೆ ಎಂಬ ಚಿಂತನೆ ನಮ್ಮದು. ಎಲ್ಲ ಬಡವರಿಗೆ ಮನೆ ನಿರ್ಮಿಸಿ ಕೊಡುವ ಉದ್ದೇಶ ಈಡೇರಿಸಬೇಕಿದೆ. ಅದಕ್ಕಾಗಿ ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ಕೊಡಲು ಸೂಚಿಸಲಾಗಿದೆ. ಹಿಂದೆ ನೀಡಿದ್ದ ಅನುದಾನ ಪೂರ್ತಿ ಬಳಕೆ ಮಾಡಲು ತಿಳಿಸಲಾಗಿದೆ ಎಂದು ತಿಳಿಸಿದರು.

ಆತ್ಮ ಯೋಜನೆಯಡಿ ಹೆಚ್ಚುವರಿ ಸಿಬ್ಬಂದಿ ನೀಡಲು ಒಪ್ಪಿಗೆ ಕೊಡಲಾಗಿದೆ. ವಿಕಸಿತ ಭಾರತ ನಿರ್ಮಾಣದ ಸಂಕಲ್ಪ ನಮ್ಮದು. ವಿಕಸಿತ ಭಾರತಕ್ಕಾಗಿ ವಿಕಸಿತ ಕರ್ನಾಟಕ ಎಂಬುದು ನಮ್ಮ ಚಿಂತನೆ ಎಂದು ವಿವರಿಸಿದರು. ರಾಜ್ಯ ಸರಕಾರವು ಸಕಾಲದಲ್ಲಿ ಅನುದಾನವನ್ನು ಬಳಸಿ; ಬಳಕೆ ಸಂಬಂಧಿತ ದೃಢಪತ್ರ ಕಳಿಸಬೇಕು ಎಂದು ಸೂಚಿಸಿದರು.

 

ಆರೋಪ ಪ್ರತ್ಯಾರೋಪದ ರಾಜಕಾರಣ ನಮ್ಮದಲ್ಲ; ನಮ್ಮದು ವಿಕಾಸದ- ಅಭಿವೃದ್ಧಿಯ ರಾಜಕಾರಣ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಹಲವು ಯೋಜನೆಗಳಲ್ಲಿ ಕರ್ನಾಟಕವು ಅನುದಾನವನ್ನು ಖರ್ಚು ಮಾಡಿಲ್ಲ ಎಂದು ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago