ಹಾವೇರಿ : ಒಂದಲ್ಲ ಒಂದು ದಿನ ಕರ್ನಾಟಕದಲ್ಲೂ ಜೆಸಿಬಿ ಬರುತ್ತದೆ. ಒಂದಲ್ಲ ಒಂದು ದಿನ ನಾನು ಆ ಸ್ಥಾನಕ್ಕೆ ಬಂದೇ ಬರುತ್ತೇನೆ. ಇಂದು ನಮ್ಮ ಬಾವುಟ ಹಾರಿಸೋಕೆ ವಿರೋಧ ಮಾಡಿದವರು ಮುಂದಿನ ದಿನಗಳಲ್ಲಿ ನಮ್ಮ ಬಾವುಟ ಹಾರಿಸೋ ಹಾಗೆ ಮಾಡುತ್ತೇನೆ ನೊಡ್ತಾ ಇರಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಗಣಪತಿ ಉತ್ಸವದಲ್ಲಿ ಮಾತನಾಡಿದ ಅವರು, ಇಂದು ಹಸಿರು ಬಾವುಟ ಹಾರಿಸೋಕೆ ಒಡಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಹಸಿರು ಬಾವುಟನೇ ಇಲ್ದಂಗೆ ಮಾಡ್ತೀವಿ. ಕೆಲ ಸ್ವಾಮೀಜಿಗಳು ಸನಾತನ ಧರ್ಮ ಉಳಿಸುವ ಕೆಲಸ ಮಾಡುತ್ತಿಲ್ಲ.
2024ರ ಚುನಾವಣೆಯಲ್ಲಿ ಮತ್ತೆ ಮೊದಿಯನ್ನು ಬೆಂಬಲಿಸಬೇಕು. ಮುಂದಿನ 25 ವರ್ಷ ದೇಶ ನಮ್ಮ ಕೈಯಲ್ಲೇ ಇರುತ್ತದೆ.ಧರ್ಮ ಉಳಿಸುವ ಕೆಲಸ ಮಾಡಬೇಕಾದವರು ಮಂತ್ರಿ ಮಾಡಿ ಮುಖ್ಯಮಂತ್ರಿ ಮಾಡಿ ಅಂತಾ ಲಾಬಿ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಇಂಡಿಯಾ ಅಂತಾ ಇಟ್ಟವರು ಬ್ರಿಟಿಷರು. ನೀವು ಭಾರತೀಯಾರ? ಅಥವಾ ಬ್ರಿಟಿಷರಿಗೆ ಹುಟ್ಟಿದ್ದೀರಾ? ನಾವು ಭಾರತೀಯರು ನಮ್ಮ ಭಾರತದ ಒಂದು ಟವರ್ ಮೇಲೆ ಒಂದು ಧ್ವಜ ಹಾರಿಸಿದಕ್ಕೆ ಉರಿಯುತ್ತದೆ. ನಮಗಿಂತ ದೊಡ್ಡ ಧ್ವಜ ಹಾರಿಸಿದರೆ ಬಹಳ ದೊಡ್ಡವರಾದ್ರಾ? ನಿಮ್ಮ ಅಪ್ಪಂದಿರಿಗೆ ಹುಟ್ಟಿದ್ದೀರಾ? ನಾವು ಚಂದ್ರನ ಮೇಲೆ ತ್ರಿವಣಧ್ವಜ ಹಾರಿಸಿದ್ದೇವೆ. ನಿಮ್ಮಂಪ್ಪನಿಗೆ ಹುಟ್ಟಿದ್ರೆ ಅಲ್ಲಿ ಹೋಗಿ ಧ್ವಜ ಹಾರಿಸಿ. ಅನ್ನ ತಿನ್ನೋದು ಭಾರತದ್ದು, ನೀರು ಕುಡಿಯುವುದು ಭಾರತದ್ದು. ಮತ್ತೆ ಪಾಕಿಸ್ತಾನಕ್ಕೆ ಜೈ ಅಂತೀರಾ ಅಲ್ಲ, ಯಾರಿಗೆ ಹುಟ್ಟಿದ್ದಿರಾ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…