Featured

ಕರ್ನಾಟಕದಿಂದ ಕಾಶಿಯಾತ್ರೆ ತೆರಳುವ ಭಕ್ತರಿಗೆ 5 ಸಾವಿರ ರೂ. ಸಹಾಯಧನ – Vishwanews24

ಕರ್ನಾಟಕದಿಂದ ಕಾಶಿಯಾತ್ರೆ ತೆರಳುವ ಭಕ್ತರಿಗೆ 5 ಸಾವಿರ ರೂ. ಸಹಾಯಧನ

ಬೆಂಗಳೂರು :  ಕರ್ನಾಟಕದಿಂದ ಕಾಶಿಯಾತ್ರೆ ತೆರಳುವ ಭಕ್ತರಿಗೆ 5 ಸಾವಿರ ರೂ. ಸಹಾಯಧನ ನೀಡುವುದಾಗಿಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಬಜೆಟ್‌ನಲ್ಲಿ ಸಹಾಯಧನ ನೀಡುವುದಾಗಿ ಘೋಷಣೆ ಮಾಡಲಾಗಿತ್ತು.ಕಂದಾಯ ಇಲಾಖೆ (ಧಾರ್ಮಿಕ ದತ್ತಿ ಇಲಾಖೆ) ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಎಲ್. ವರಲಕ್ಷ್ಮೀ ಈ ಕುರಿತು ಆದೇಶ ಹೊರಡಿಸಿದ್ದಾರೆ. 30 ಸಾವಿರ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ. ಸಹಾಯಧನ ಸಿಗಲಿದೆ.

ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಬಜೆಟ್‌ನಲ್ಲಿ ಕಾಶಿಯಾತ್ರಾರ್ಥಿಗಳಿಗೆ ಸಹಾಯಧನ ನೀಡುವುದಾಗಿ ಘೋಷಣೆ ಮಾಡಿದ್ದರು. ಈಗ ಈ ಕುರಿತು ಆದೇಶ ಹೊರಡಿಸಲಾಗಿದೆ.

ರಾಜ್ಯದಿಂದ ಕಾಶಿಯಾತ್ರೆಯನ್ನು ಕೈಗೊಳ್ಳುವ 30,000 ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5 ಸಾವಿರ ರೂ.ಗಳ ಸಹಾಯಧನ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

2022-23ನೇ ಸಾಲಿನ ಆಯವ್ಯಯ ಭಾಷಣದಲ್ಲಿನ ಕಂಡಿಕೆ-366ರಲ್ಲಿನ ಘೋಷಣೆಯಂತೆ ರಾಜ್ಯದಿಂದ ಕಾಶಿಯಾತ್ರೆಯನ್ನು ಕೈಗೊಳ್ಳುವ 30 ಸಾವಿರ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5 ಸಾವಿರ ರೂ.ಗಳ ಸಹಾಯಧನವನ್ನು ನೀಡಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಲಾಗಿದೆ ಎಂದು ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಕೆಲವು ದಿನಗಳ ಹಿಂದೆ ಮಾತನಾಡಿದ್ದ ಮುಜರಾಯಿ ಇಲಾಖೆ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಸರ್ಕಾರದ ಘೋಷಣೆಯಿಂದ ದೇವಾಲಯ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ಸಿಕ್ಕಿದಂತೆ ಆಗುತ್ತದೆ. ಜೀವಮಾನದಲ್ಲಿ ಒಮ್ಮೆಯಾದರೂ ಕಾಶಿಯಾತ್ರೆ ಮಾಡಬೇಕು ಎಂಬುದು ಬಹುತೇಕ ಹಿಂದೂಗಳ ಕನಸು ಎಂದು ಹೇಳಿದ್ದರು.

ಅನೇಕರಿಗೆ ನಾನಾ ಕಾರಣಗಳಿಂದ ಕಾಶಿಯಾತ್ರೆಗೆ ತೆರಳಲು ಸಾಧ್ಯವಾಗುವುದಿಲ್ಲ. ಸರ್ಕಾರದ ಸಹಾಯಧನದೊಂದಿಗೆ ಆಸಕ್ತರು ಕಾಶಿಯಾತ್ರೆಗೆ ಹೋಗಿ ಬರಲು ಸಾಧ್ಯವಾಗುತ್ತದೆ ಎಂದು ಸಚಿವರು ತಿಳಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಕಾಶಿಯ ವಿಶ್ವನಾಥ ಮಂದಿರವನ್ನು ವಿಶಿಷ್ಟ ರೀತಿಯಲ್ಲಿ ಜೀರ್ಣೋದ್ಧಾರ ಮಾಡುವ ಮೂಲಕ ಐತಿಹಾಸಿಕ ಕಾಶಿಗೆ ದಿವ್ಯಕಾಶಿ-ಭವ್ಯಕಾಶಿ ಎಂದು ಹೆಸರು ಬರುವಂತೆ ಮಾಡಿದ್ದಾರೆ. ರಾಜ್ಯದ ಸಾವಿರಾರು ಯಾತ್ರಾರ್ಥಿಗಳು ಕಾಶಿಗೆ ಭೇಟಿ ನೀಡಿ ವಿಶ್ವನಾಥನ ದರ್ಶನ ಪಡೆಯುತ್ತಾರೆ ಎಂದು ಸಚಿವರು ವಿವರಿಸಿದ್ದರು.\

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago