Featured

ಕರ್ನಾಟಕದ ಜನರಿಗೆ ಕೆಎಂಎಫ್​ನಿಂದ ಗುಡ್​ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ – vishwanews24

ಕರ್ನಾಟಕದ ಜನರಿಗೆ ಕೆಎಂಎಫ್​ನಿಂದ ಗುಡ್​ ನ್ಯೂಸ್: ಸೆ 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ

ಬೆಂಗಳೂರು: ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೆಪ್ಟೆಂಬರ್ 22ರಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಇಳಿಕೆ ಮಾಡಿದ ಬೆನ್ನಲ್ಲೇ ಇದೀಗ ಕೆಎಂಎಫ್ ನಂದಿನಿ ಉತ್ಪನ್ನಗಳ ದರ ಇಳಿಕೆಗೆ ಮುಂದಾಗಿದೆ. ಆದರೆ ಈ ಬಗ್ಗೆ ಕೆಎಂಎಫ್ ಅಧಿಕೃತ ಆದೇಶ ಹೊರಡಿಸುವುದು ಬಾಕಿಯಿದೆ.

ದರ ಇಳಿಕೆ ಬಗ್ಗೆ ಶುಕ್ರವಾರ ಕೆಎಂಎಫ್ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ ಎಂಬುವುದನ್ನು ನಿರ್ಧರಿಸಲಾಗಿದೆ. ಮೊಸರಿನ ದರ ಲೀಟರ್‌ಗೆ 4 ರೂ. ಇಳಿಕೆ ನಿರೀಕ್ಷೆ ಇದೆ. ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆಯಾಗಿದೆ.

ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಿದೆ. ಕೇಂದ್ರದ ನೂತನ ಜಿಎಸ್‌ಟಿ ಪದ್ಧತಿ ಸೆ. 22ರಿಂದ ಜಾರಿಗೆ ಬರಲಿದೆ. ಈ ಮೂಲಕ ಗ್ರಾಹಕರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿತ್ತು. ಇದೀಗ ಕೆಎಂಎಫ್ ದರ ಇಳಿಕೆಗೆ ಸಜ್ಜಾಗುವ ಮೂಲಕ ರಾಜ್ಯದ ಜನರಿಗೆ ಗುಡ್ ನ್ಯೂಸ್ ಕೊಟ್ಟಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

4 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

4 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

5 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

5 hours ago