ಬೆಂಗಳೂರು: ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೆಪ್ಟೆಂಬರ್ 22ರಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸರ್ಕಾರ ಆಹಾರ ಉತ್ಪನ್ನಗಳ ಮೇಲಿನ ಜಿಎಸ್‌ಟಿ ಇಳಿಕೆ ಮಾಡಿದ ಬೆನ್ನಲ್ಲೇ ಇದೀಗ ಕೆಎಂಎಫ್ ನಂದಿನಿ ಉತ್ಪನ್ನಗಳ ದರ ಇಳಿಕೆಗೆ ಮುಂದಾಗಿದೆ. ಆದರೆ ಈ ಬಗ್ಗೆ ಕೆಎಂಎಫ್ ಅಧಿಕೃತ ಆದೇಶ ಹೊರಡಿಸುವುದು ಬಾಕಿಯಿದೆ.
ದರ ಇಳಿಕೆ ಬಗ್ಗೆ ಶುಕ್ರವಾರ ಕೆಎಂಎಫ್ ಅಧಿಕಾರಿಗಳು ಸಭೆ ಮಾಡಿದ್ದಾರೆ. ಸಭೆಯಲ್ಲಿ ಯಾವುದರ ದರ ಎಷ್ಟು ಇಳಿಕೆ ಎಂಬುವುದನ್ನು ನಿರ್ಧರಿಸಲಾಗಿದೆ. ಮೊಸರಿನ ದರ ಲೀಟರ್‌ಗೆ 4 ರೂ. ಇಳಿಕೆ ನಿರೀಕ್ಷೆ ಇದೆ. ಜೊತೆಗೆ ತುಪ್ಪ, ಬೆಣ್ಣೆ, ಲಸ್ಸಿ ಸೇರಿ ಹಲವು ಉತ್ಪನ್ನಗಳ ದರ ಕೂಡ ಇಳಿಕೆಯಾಗಿದೆ.
ಇತ್ತೀಚೆಗೆ ಕೇಂದ್ರ ಸರ್ಕಾರ ಹಾಲಿನ ಉತ್ಪನ್ನಗಳ ಮೇಲಿನ ಸರಕು ಸೇವಾ ತೆರಿಗೆಯನ್ನು ಶೇ.12ರಿಂದ 5ಕ್ಕೆ ಇಳಿಕೆ ಮಾಡಿದೆ. ಕೇಂದ್ರದ ನೂತನ ಜಿಎಸ್‌ಟಿ ಪದ್ಧತಿ ಸೆ. 22ರಿಂದ ಜಾರಿಗೆ ಬರಲಿದೆ. ಈ ಮೂಲಕ ಗ್ರಾಹಕರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿತ್ತು. ಇದೀಗ ಕೆಎಂಎಫ್ ದರ ಇಳಿಕೆಗೆ ಸಜ್ಜಾಗುವ ಮೂಲಕ ರಾಜ್ಯದ ಜನರಿಗೆ ಗುಡ್ ನ್ಯೂಸ್ ಕೊಟ್ಟಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…