Featured

ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ :  ಸಿಎಂ – vishwanews24

ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ :  ಸಿಎಂ

ವಿಜಯಪುರ : ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

ಅವರು ಇಂದು ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವಿಜಯಪುರ ಜಿಲ್ಲೆ ವತಿಯಿಂದ ವಿಜಯಪುರ ದ ವಿ. ಬಿ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವಿಜಯಪುರ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ನಂತರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರೆವೇರಿಸಿ ಮಾತನಾಡಿದರು.

ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಜ್ಞತೆಗಳನ್ನು ಅರ್ಪಿಸಿದರು.

ವಿಜಯಪುರದ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಎಂದರು. 45 ವರ್ಷಗಳಿಂದ ಇಡೀ ರಾಜ್ಯ ಸುತ್ತಾಡಿದ್ದು, ವಿಜಯಪುರ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದಾರೆ ಎಂದರು.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

12 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

14 hours ago