ರಾಜ್ಯ ನ್ಯೂಸ್

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್ ವೈ ; ರೈತರು ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರ

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ವಿರೋಧದ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬೆಂಗಳೂರಿನ ರಾಜಭವನದ ಆವರಣದಲ್ಲಿರುವ ಗಾಜಿನ ಮನೆಯಲ್ಲಿ ಬಿಎಸ್ ವೈ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅವರು ಬಿಎಸ್ ವೈಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರೈತರು ಮತ್ತು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಆ ಮೂಲಕ ಬಿಎಸ್ ವೈ ಮೂರನೇ ಬಾರಿಗೆ ಮತ್ತು ರಾಜ್ಯದ 23ನೇ ಮುಖ್ಯಮಂತ್ರಿಯಾಗಿ ಬಿಎಸ್ ವೈ ಪದಗ್ರಹಣ ಮಾಡಿದ್ದಾರೆ.  ಈ ವೇಳೆ ರಾಜಭವನದ ಆವರಣದಲ್ಲಿ ಮತ್ತು ರಾಜನಭವನದ ಹೊರಗೆ ನೆರೆದಿದ್ದ ಸಾವಿರಾರು ಬಿಜೆಪಿ ಕಾರ್ಯಕರ್ತರು ಬಿಎಸ್ ವೈ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜೈಕಾರ ಕೂಗಿದರು.
ಇನ್ನು ಪ್ರತಿಜ್ಞಾ ವಿಧಿ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಅನಂತ್ ಕುಮಾರ್, ಡಿವಿ ಸದಾನಂದಗೌಡ, ರಾಜ್ಯ ನಾಯಕರಾದ ಕೆಎಸ್ ಈಶ್ವರಪ್ಪ, ಕಟ್ಟಾ ಸುಬ್ರಮಣ್ಯ ನಾಯ್ಡು ಸೇರಿದಂತೆ ಬಿಜೆಪಿ ಹಲವು ಗಣ್ಯ ನಾಯಕರು ಉಪಸ್ಥಿತರಿದ್ದರು.
Vishwa News 24

Recent Posts

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

35 minutes ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

2 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

2 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

2 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

2 hours ago

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ – vishwanews24

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…

3 hours ago