ಯಲ್ಲಾಪುರ: ಸಿದ್ದರಾಮಯ್ಯನವರ ನೇತೃತ್ವದ ಕರ್ನಾಟಕದ ಸರಕಾರ ಆಡಳಿತಾತ್ಮಕವಾಗಿ ಸಂಪೂರ್ಣವಾಗಿ ಶವವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಟೀಕಿಸಿದ್ದಾರೆ.
ಶುಕ್ರವಾರ ನಡೆದ ಜನಾಕ್ರೋಶ ಯಾತ್ರೆಯ ಸಭೆಯಲ್ಲಿ ಮಾತನಾಡಿದ ಅವರು, ಉದಯಗಿರಿಯಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಇಡಲಾಗಿದೆ. ಈ ಸರಕಾರ ಜೀವಂತ ಇಲ್ಲ. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು.
ಪ್ರವೀಣ್ ನೆಟ್ಟಾರು ಕೊಲೆ ಮಾಡಿದ ಆರೋಪಿಯನ್ನು ಪೊಲೀಸರ ಸಮಕ್ಷಮದಲ್ಲಿ ಕೋರ್ಟಿಗೆ ತರುವಾಗ ಅವನ ಹಣೆಗೆ ಮುತ್ತಿಟ್ಟಿದ್ದಾರೆ. ಸರಕಾರ ಏನು ಮಾಡುತ್ತಿದೆ? ಗೃಹ ಇಲಾಖೆ ಏನು ಮಾಡುತ್ತಿದೆ. ಪೊಲೀಸರ ಮೌನವೇಕೆ? ಎಲ್ಲಿದೆ ಕಾನೂನು ವ್ಯವಸ್ಥೆ? ಎಂದು ಪ್ರಶ್ನಿಸಿದರು.
ಐಜಿ ಬರ್ತಾರೆ ಎಂದು ಬಿಜೆಪಿ ಕಾರ್ಯಕರ್ತನನ್ನು ಕರೆದುಕೊಂಡು ಹೋಗಿ ಮೈ ಹುಡಿ ಮಾಡಿದರಂತೆ. ಅದ್ಯಾಕೆ ಎಂದು ಕೇಳಿದರೆ 40 ಕಾರ್ಯಕರ್ತರ ಮೇಲೆ ಎಫ್‍ಐಆರ್ ದಾಖಲಿಸಿದರಂತೆ. ಏನು ರಾಜ್ಯ ಇದು?. ರಾಜ್ಯದ ಒಂದು ಲಕ್ಷ ಪೊಲೀಸರಿಗೆ ಅನ್ಯಾಯ ಆದಾಗ ಬೀದಿಗಿಳಿದು ಪೊಲೀಸರಿಗೆ ನ್ಯಾಯ ಕೇಳಿದ್ದು ಬಿಜೆಪಿ ಎಂಬುದನ್ನು ಮರೆಯಬಾರದು ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…