ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ – Vishwanews24

Featured, ರಾಜ್ಯ ನ್ಯೂಸ್

ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ – Vishwanews24

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗುತ್ತಿದ್ದಂತೇ, ಅವರ ಪದಗ್ರಹಣಕ್ಕೂ ಮುಹೂರ್ತ ಫಿಕ್ಸ್ ಆಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವಂತ ಬಸವರಾಜ ಬೊಮ್ಮಾಯಿಯವರು ( Karnataka News Chief Minister ) ಇಂದು ಬೆಳಿಗ್ಗೆ 11 ಗಂಟೆಗೆ, ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಕುರಿತಂತೆ ರಾಜಭವನದ ಬಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾಳೆ ಬೆಳಿಗ್ಗೆ 11 ಗಂಟೆಗೆ ನಾನೊಬ್ಬನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ. ನನ್ನ ಮೇಲೆ ನಂಬಿಕೆಯಿಟ್ಟು ಮುಖ್ಯಮಂತ್ರಿ ಸ್ಥಾನ ನೀಡಿದಂತ ಯಡಿಯೂರಪ್ಪ ಅವರಿಗೆ, ಬಿಜೆಪಿ ವರಿಷ್ಠರಿಗೆ ನನ್ನ ಧನ್ಯವಾದಗಳು ಎಂದು ತಿಳಿಸಿದರು.

ಅಂದಹಾಗೇ, ನಿನ್ನೆ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಘೋಷಣೆಯಾಗುತ್ತಿದ್ದಂತೆ, ರಾಜಭವನಕ್ಕೆ ತೆರಳಿ, ತಮ್ಮ ಹಕ್ಕು ಮಂಡನೆಯ ಪತ್ರವನ್ನು ಮಂಡಿಸಿದರು. ಇದಕ್ಕೂ ಮುನ್ನಾ ಮಾತನಾಡಿದಂತ ಅವರು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಇದರಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯವಿಲ್ಲ. ಅವರ ಆಯ್ಕೆಯನ್ನು ವರಿಷ್ಠರ ಸೂಚನೆಯಲ್ಲೇ ಮಾಡಲಾಗಿರೋದಾಗಿ ಹಂಗಾಮಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ( BS Yediyurappa ) ಅವರು ತಿಳಿಸಿದರು.