ಬೆಂಗಳೂರು: ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆಯನ್ನು ಜಿಲ್ಲಾಕೇಂದ್ರವನ್ನಾಗಿ ಮಾಡುವ ಮತ್ತು ಆರು ತಾಲೂಕುಗಳನ್ನು ಸೇರ್ಪಡೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಬಳ್ಲಾರಿ ಜಿಲ್ಲೆಯಲ್ಲಿದ್ದ ಹೊಸಪೇಟೆ, ಹರಪನಹಳ್ಳಿ, ಹೂವಿನ ಹಡಗಲಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲು ಇಂದು ನಡೆದ ಸಚಿವ ಸಭೆಯಲ್ಲಿ ಈ ಕುರಿತು ತೀರ್ಮಾನ ಮಾಡಲಾಗಿದೆ.
ಈ ಹಿಂದೆ ವಿಜಯನಗರ ಜಿಲ್ಲೆ ರಚನೆಗೆ ಸಚಿವ ಆನಂದ್ ಸಿಂಗ್ ಒತ್ತಾಯ ಮಾಡಿದ್ದರು. ಆನಂದ್ ಸಿಂಗ್ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರವಾದ ಬಳಿಕ 2019ರ ಸಪ್ಟೆಂಬರ್ ನಲ್ಲೇ ವಿಜಯನಗರ ನೂತನ ಜಿಲ್ಲೆಯ ಬಗ್ಗೆ ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದರು. ಆದರೆ ಅದು ಅನುಷ್ಠಾನಕ್ಕೆ ಬಂದಿರಲಿಲ್ಲ. ಸದ್ಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾಗಿ ರಚನೆಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…