Featured

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ : ನೂತನ ಜಿಲ್ಲೆಗೆ ಆರು ತಾಲೂಕುಗಳು ಸೇರ್ಪಡೆ -Vishwanews24

ಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರ : ನೂತನ ಜಿಲ್ಲೆಗೆ ಆರು ತಾಲೂಕುಗಳು ಸೇರ್ಪಡೆ -Vishwanews24

ಬೆಂಗಳೂರು: ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆಯನ್ನು ಜಿಲ್ಲಾಕೇಂದ್ರವನ್ನಾಗಿ ಮಾಡುವ ಮತ್ತು ಆರು ತಾಲೂಕುಗಳನ್ನು ಸೇರ್ಪಡೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾಕೇಂದ್ರವಾಗಿರಲಿದ್ದು, ಬಳ್ಲಾರಿ ಜಿಲ್ಲೆಯಲ್ಲಿದ್ದ ಹೊಸಪೇಟೆ, ಹರಪನಹಳ್ಳಿ, ಹೂವಿನ ಹಡಗಲಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಕೂಡ್ಲಿಗಿ ತಾಲೂಕುಗಳನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲು ಇಂದು ನಡೆದ ಸಚಿವ ಸಭೆಯಲ್ಲಿ ಈ  ಕುರಿತು ತೀರ್ಮಾನ ಮಾಡಲಾಗಿದೆ.

ಬಳ್ಳಾರಿ ಜಿಲ್ಲೆಯಲ್ಲಿ 11 ತಾಲೂಕುಗಳು ಮತ್ತು ಮೂರು ಕಂದಾಯ ಉಪವಿಭಾಗಳಿದ್ದವು. ಸದ್ಯ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರಚಿಸಿರುವ ಕಾರಣ ಆರು ತಾಲೂಕುಗಳು ಹೊಸ ಜಿಲ್ಲೆಗೆ ಸೇರ್ಪಡೆಯಾಗಿದೆ. ಹೀಗಾಗಿ ಬಳ್ಳಾರಿ ಜಿಲ್ಲೆಗೆ ಸದ್ಯ ಐದು ತಾಲೂಕುಗಳು  ಉಳಿದಿವೆ. ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಮತ್ತು ಕುರಗೋಡು ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿ ಮುಂದುವರಿಯಲಿದೆ.

ಈ ಹಿಂದೆ ವಿಜಯನಗರ ಜಿಲ್ಲೆ ರಚನೆಗೆ ಸಚಿವ ಆನಂದ್ ಸಿಂಗ್ ಒತ್ತಾಯ ಮಾಡಿದ್ದರು. ಆನಂದ್ ಸಿಂಗ್ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರವಾದ ಬಳಿಕ 2019ರ ಸಪ್ಟೆಂಬರ್ ನಲ್ಲೇ ವಿಜಯನಗರ ನೂತನ ಜಿಲ್ಲೆಯ ಬಗ್ಗೆ ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದರು. ಆದರೆ ಅದು  ಅನುಷ್ಠಾನಕ್ಕೆ ಬಂದಿರಲಿಲ್ಲ. ಸದ್ಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾಗಿ ರಚನೆಯಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago