ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾದ ಹಿನ್ನೆಲೆಯಲ್ಲಿ ಲಾಕ್‌ಡೌನ್ ನಿರ್ಬಂಧಗಳಲ್ಲಿ ಮತ್ತಷ್ಟು ಸಡಿಲಿಕೆ ಮಾಡಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಭಕ್ತರ ಪ್ರವೇಶಕ್ಕೆ ಇದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಪ್ರಾರ್ಥನಾ ಸ್ಥಳಗಳಾದ ದೇವಸ್ಥಾನ, ಮಸೀದಿ, ಗುರುದ್ವಾರ ಹಾಗೂ ಇತರೆ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಪೂಜೆ ಹಾಗೂ ಪ್ರಾರ್ಥನೆ ಚಟುವಟಿಕೆಗಳಿಗೆ ಅವಕಾಶ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಆದೇಶವು ಭಾನುವಾರದಿಂದ (ಜುಲೈ 25) ಜಾರಿಗೆ ಬರಲಿದೆ. ಧಾರ್ಮಿಕ ಸ್ಥಳಗಳಲ್ಲಿ ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳು ಹಾಗೂ ಕೋವಿಡ್ 19 ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಎಲ್ಲ ಧಾರ್ಮಿಕ ಕೇಂದ್ರಗಳಲ್ಲಿಯೂ ಪೂಜಾ ವಿಧಿವಿಧಾನ ಪಾಲಿಸಲು ಅನುಮತಿ ಕೊಡಲಾಗಿದೆ. ಆದರೆ ಜಾತ್ರೆಗಳು, ದೇವಾಲಯ ಉತ್ಸವಗಳು, ಮೆರವಣಿಗೆಗಳು ಮತ್ತು ಜನಸಮೂಹ ಸೇರುವಿಕೆ ಮೇಲಿನ ನಿರ್ಬಂಧ ಮುಂದುವರಿಯಲಿದೆ.
ಅಲ್ಲದೆ, ಮನರಂಜನಾ ಪಾರ್ಕ್‌ಗಳು ಹಾಗೂ ಅದೇ ರೀತಿಯ ಸ್ಥಳಗಳನ್ನು ಮತ್ತೆ ಆರಂಭಿಸಲು ಅವಕಾಶ ಕೊಡಲಾಗಿದೆ. ಇಲ್ಲಿ ಕೂಡ ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಲಾಗಿದೆ. ಮನರಂಜನಾ ಪಾರ್ಕ್‌ಗಳನ್ನು ತೆರೆದಿದ್ದರೂ, ಅಲ್ಲಿ ಮುಖ್ಯವಾಗಿ ನಡೆಯುವ ಜಲ ಕ್ರೀಡೆ ಅಥವಾ ನೀರಿಗೆ ಸಂಬಂಧಿಸಿದ ಸಾಹಸ ಚಟುವಟಿಕೆಗಳಿಗೆ ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…